ಕೊರಟಗೆರೆ: ನ್ಯೂಸ್ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಕೊರಟಗೆರೆ :-ಅಗ್ರಹಾರದ ಮುಖ್ಯರಸ್ತೆ ಪೆಟ್ರೋಲ್ ಬಂಕ್ ಹತ್ತಿರ ರಾತ್ರಿ ಲಾರಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ..

ಬೈಕ್ ಸವಾರ ವೆಂಕಟರಮಣಪ್ಪ 38ವರ್ಷ ಕೊರಟಗೆರೆಯ ಬೈಪಾಸ್ ರಸ್ತೆಯಲ್ಲಿರುವ ನವೀನ್ ಬಾರ್&ರೆಸ್ಟೋರೆಂಟ್ ನಲ್ಲಿ ಕ್ಯಾಷಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು..

ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಂದರ್ಭದಲ್ಲಿ ಎದುರಿನಿಂದ ಬಂದ ಲಾರಿ ಏಕಾಏಕಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವೆಂಕಟರಮಣಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ .

ಬೈಕ್ ಸವಾರ ಸಾವನ್ನಪ್ಪಿದ ಕೂಡಲೇ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ

ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಬಂದ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳವನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ …

ವರದಿ :- ಹರೀಶ್ ಬಾಬು ಬಿ.ಹೆಚ್ ಕೊರಟಗೆರೆ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!