ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿ ಪ್ರಾಣ ಬಿಟ್ಟ ಕರಡಿ ಮರಿ

ಕೊರಟಗೆರೆ :- ತಾಲ್ಲೂಕಿನಲ್ಲಿ ತಡರಾತ್ರಿ ಸುರಿದ ಭಾರಿ ಮಳೆಯಿಂದ ಹುಲಿಕುಂಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿಕ್ಕೇಗೌಡನಹಳ್ಳಿ ಗ್ರಾಮದ ಪಕ್ಕದಲ್ಲಿರುವ ಹಳ್ಳದಲ್ಲಿ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಆಹಾರ ಅರಸಿ ಬಂದ ಕರಡಿ ಮರಿ ಹಳ್ಳ ದಾಟಲು ಸಾಧ್ಯವಾಗದೆ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ..

ಕಳೆದ 3ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಾಲ್ಲೂಕಿನ ಎಲ್ಲ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ..

ಹಳ್ಳದಲ್ಲಿ ಹೆಚ್ಚಿದ ನೀರಿನ ರಭಸದಿಂದ ಕರಡಿ ಮರಿಯೊಂದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ..

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ
ಕರಡಿ 2ವರ್ಷದ ಮರಿ ಯಾಗಿರುವುದರಿಂದ ಈಜು ಬರದೆ ಮುಳುಗಿ ಸಾವನ್ನಪ್ಪಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ …

ವರದಿ :- ಹರೀಶ್ ಬಾಬು ಬಿ.ಹೆಚ್ ಕೊರಟಗೆರೆ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!