ಗುಬ್ಬಿ: ಗಂಡನೇ ತನ್ನ ಹೆಂಡತಿ ಹಾಗೂ ನಾಲ್ಕು ವರ್ಷದ ಮಗುವಿಗೆ ಹಾರೆಯಿಂದ ತಲೆಗೆ ಹೊಡೆದು ಕೊಲೆ ಮಾಡಿದ ಭೀಕರ ಘಟನೆ ಮುಂಜಾನೆ ತಾಲ್ಲೂಕಿನ ನಿಟ್ಟೂರು ಹೋಬಳಿ ಮಾವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮುಂಜಾನೆ ಪತ್ನಿ ಕಾವ್ಯ(25) ಪುತ್ರ ಜೀವನ್ ಮೇಲೆರಗಿದ ಆರೋಪಿ ಸ್ವಾಮಿ(33) ಕೈ ಸಿಕ್ಕ ಹಾರೆಯಿಂದ ತನ್ನ ಪತ್ನಿ ಮಗುವಿನ ತಲೆಗೆ ಬಲವಾಗಿ ಹೊಡೆದು ಕೊಲೆ ಮಾಡಿದ್ದಾನೆ. ರಕ್ತಸಿಕ್ತ ವಾಗಿ ಮನೆಯಲ್ಲಿ ಬಿದ್ದಿದ್ದ ಶವ ಕಂಡು ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ.
ಆರೋಪಿ ಸ್ವಾಮಿ ಪರಾರಿ ಆಗುವ ಮುನ್ನ ಸ್ಥಳೀಯರೇ ಹಿಡಿದು ಕಟ್ಟಿ ಹಾಕಿ ಚೇಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಕೊಲೆಗೆ ಕಾರಣ ತಿಳಿದಬಂದಿಲ್ಲ. ಗ್ರಾಮದಲ್ಲಿ ಅರ್ಚಕ ವೃತ್ತಿ ಮಾಡುತ್ತಿದ್ದ ಆರೋಪಿ ಸ್ವಾಮಿ ಈಚೆಗೆ ಅರ್ಚಕ ವೃತ್ತಿಯಿಂದ ತೆಗೆಯಲಾಗಿತ್ತು. ನಂತರದಲ್ಲಿ ತಿರುಗಾಡಿಕೊಂಡು ಸ್ವಾಮಿ ತನ್ನ ಕುಟುಂಬದೊಂದಿಗೆ ಜಗಳ ಆಡಿಕೊಂಡಿದ್ದ ಎಂದು ಸ್ಥಳೀಯರು ಹೇಳುತ್ತಾರೆ.
ಸ್ಥಳಕ್ಕೆ ಗುಬ್ಬಿ ಸಿಪಿಐ ನದಾಫ್ ಬೇಟಿ ನೀಡಿದ್ದು ಚೇಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.