ಇಂದು ತಾಲ್ಲೂಕು ಮಟ್ಟದ ಕ್ರೀಡಾಕೂಟ : ತಾಪಂ ಇಓ ಶಿವಪ್ರಕಾಶ್.

ಗುಬ್ಬಿ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿ ವತಿಯಿಂದ ಇದೇ ತಿಂಗಳ 21 ರ ಶುಕ್ರವಾರ ಬೆಳಿಗ್ಗೆ 11 ಕ್ಕೆ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ತಾಪಂ ಇಓ ಶಿವಪ್ರಕಾಶ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈಗಾಗಲೇ ನಡೆದ ಕ್ರೀಡಾಸ್ಪರ್ಧೆಯಲ್ಲಿ ಜಯ ಗಳಿಸಿದ ತಂಡಗಳು ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಮ್ಮ ಆಟದ ಕೌಶಲ್ಯ ತೋರಲಿದ್ದಾರೆ. ಈ ಸಾಲಿನ ತಾಲ್ಲೂಕು ಮಟ್ಟದಲ್ಲಿ ಜಿಲ್ಲಾ ಸಚಿವ ಆರಗ ಜ್ಞಾನೇಂದ್ರ, ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಉಪಸ್ಥಿತರಿರುತ್ತಾರೆ ಎಂದರು.

ಶಾಸಕ ಎಸ್.ಆರ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಜಿ.ಎಸ್.ಬಸವರಾಜು ಹಾಗೂ ವಿಧಾನ ಪರಿಷತ್ ಎಲ್ಲಾ ಸದಸ್ಯರು ಭಾಗವಹಿಸಲಿದ್ದು, ಜಿಪಂ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಗುಬ್ಬಿ ತಾಪಂ ಆಡಳಿತಾಧಿಕಾರಿ ಕೆ.ಎಂ.ಸುಮಾ, ತಹಶೀಲ್ದಾರ್ ಬಿ.ಆರತಿ ಇತರರು ಭಾಗವಹಿಸಲಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!