ಪಾವಗಡ ತಾಲೂಕು ನಿಡಗಲ್ ಹೋಬಳಿ ಹೊಟ್ಟೆ ಬೊಮ್ಮನಹಳ್ಳಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಿಡಗಲ್ ವಾಲ್ಮೀಕಿ ಆಶ್ರಮದ ಪೀಠಾಧ್ಯಕ್ಷರಾದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿಯವರ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ಹಿಂದೂ ಧರ್ಮಕ್ಕೆ ಮಹಾನ್ ಗ್ರಂಥ ರಾಮಾಯಣವ ಪುಸ್ತಕವನ್ನು ಪ್ರತಿಯೊಬ್ಬರ ಮನೆಯಲ್ಲಿಯೂ ಓದಿ ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಪಾಲಿಸುವಂಥ ಆಗಬೇಕೆಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯ ಮುಖಂಡರು ಹಾಗೂ ರಾಜ್ಯ ಜೆಡಿಎಸ್ ಪಕ್ಷದ ಹಿರಿಯ ಉಪಾಧ್ಯಕ್ಷರಾದ ತಿಮ್ಮಾರೆಡ್ಡಿ ಅವರು ಮಾತನಾಡಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣ ಜಗತ್ತಿನಲ್ಲಿ ಸೂರ್ಯ ಚಂದ್ರ ಇರುವವರೆಗೂ ಅಜರಾಮರವಾಗಿ ಇರುತ್ತದೆ ಶ್ರೀ ಮಹರ್ಷಿ ವಾಲ್ಮೀಕಿ ರಾಮಾಯಣದಲ್ಲಿ ಸರ್ವರಿಗೂ ಸಮಬಾಳು ಸಮಪಾಲು ಎನ್ನುವ ಕಲ್ಪನೆಯನ್ನು ಶ್ರೀ ಮಹರ್ಷಿ ವಾಲ್ಮೀಕಿ ಅವರು ನೀಡಿದ್ದಾರೆ ಎಂದು ಮಾತನಾಡಿದರು
ಗ್ರಾಮದ ಪ್ರಮುಖ ಬೀದಿಗಳಲ್ಲಿ ಗ್ರಾಮದ ಮಹಿಳೆಯರು ಹಾಗೂ ಯುವಕರು ಆರತಿ ಕಳಶಗಳೊಂದಿಗೆ ಕಳತಂಡಗಳೊಂದಿಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರವನ್ನು ರಾಜ ಬೀದಿಗಳಲ್ಲಿ ಮೆರವಣಿಗೆಯನ್ನು ನಡೆಸಿದರು
ಕಾರ್ಯಕ್ರಮದಲ್ಲಿ ಮುಖಂಡರುಗಳಾದ ಅಂಜಿನಪ್ಪ. ಮದಕರಿ ನಾಯಕ ಪಿಡಿಒ ಮಂಜುನಾಥ್ ಶಿಕ್ಷಕರದ ಮೂಡಲಗಿರಿಯಪ್ಪ ಗ್ರಾಮ ಪಂಚಾಯಿತಿ ಸದಸ್ಯ ಶಿವಣ್ಣ ಭಾಸ್ಕರ್ ನಾಯಕ್ ಪಾಳೇಗಾರ ಲೋಕೇಶ್ ಬೆಳ್ಳಿ ಬಟ್ಟಲು ಬಲರಾಮ್ ಚಿಕ್ಕ ತಿಮ್ಮನ ಹಟ್ಟಿ ತಿಮ್ಮಯ್ಯ ಮುಂತಾದವರು ಭಾಗವಹಿಸಿದ್ದರು