ವಿದ್ಯುತ್ ಅವಘಡ; ಯುವಕ ಸಾವು

ಪಾವಗಡ: ತಾಲೂಕಿನ ಅವಾದ್ ಕಂಪನಿಗೆ ಸೇರಿದ ಸೋಲಾರ್ ವಿದ್ಯುತ್ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಿರುಮಣಿ ಪೋಲೀಸ್ ಠಾಣೆ ವ್ಯಾಪ್ತಿಯ ಕ್ಯಾತಗಾನಚೆರ್ಲು ಗ್ರಾಮದ ಬಳಿ ಶುಕ್ರವಾರ ನಡೆದಿದೆ.

ಗೋಪಾಲ್(೨೨) ಮೃತ ದುರ್ದೈವಿಯಾಗಿದ್ದಾನೆ, ತಾಲೂಕಿನ ಚಿಕ್ಕಹಳ್ಳಿ ಗ್ರಾಮಕ್ಕೆ ಸೇರಿದ ಗೋಪಾಲ್ ಕ್ಯಾತಗಾನಚೆರ್ಲು ಬಳಿಯ ಅವಾದ್ ಸೋಲಾರ್ ಘಟಕದಲ್ಲಿ ತಾಂತ್ರಿಕ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು, ಎಂದಿನಂತೆ ಶುಕ್ರವಾರ ಕೆಲಸದಲ್ಲಿ ತೊಡಗಿದ್ದ ವೇಳೆ ಅವಘಡ ಸಂಭವಿಸಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಘಟನೆ ತಿಳಿದು ತಿರುಮಣಿ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದೂರು ದಾಖಲಿಸಿಕೊಂಡಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!