ಗುಬ್ಬಿ: ಸ್ವಚ್ಛತೆಗೆ ಆದ್ಯತೆ ನೀಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದು ತಿಪ್ಪೂರು ಬಸವೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿಶ್ವನಾಥ್ ಅಭಿಪ್ರಾಯಪಟ್ಟರು
ತಾಲೂಕಿನ ನಿಟ್ಟೂರು ಹೋಬಳಿ ತಿಪ್ಪೂರಿನ ಬಸವೇಶ್ವರ ಪ್ರೌಢಶಾಲೆಯಲ್ಲಿ ಕೇಂದ್ರ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ತುಮಕೂರು, ಎನ್ ಎಸ್ ಎಸ್ ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆ ಸ್ವಚ್ಛ ಭಾರತ 2.0 ಕಾರ್ಯಕ್ರಮಕ್ಕೆ ಚಾಲನೆನೀಡಿ ಮಾತನಾಡಿದ ಅವರು, ಮಹಾತ್ಮ ಗಾಂಧಿಧೀಜಿ ಜೀವನದಲ್ಲಿ ಸ್ವತ್ಛತೆಗೆ ಹೆಚ್ಚು ಆದ್ಯತೆ ನೀಡಿದ್ದರು. ಅವರ ಆಶಯದಂತೆ ಪ್ರತಿಯೊಬ್ಬರು ಪರಿಸರದಲ್ಲಿ ಸ್ವತ್ಛತೆ ಕಾಪಾಡುವ ಹೊಣೆ ಹೊರಬೇಕು. ಆಗ ಮಾತ್ರ ದೇಶ ಸ್ವಚ್ಛ ಮತ್ತು ಸುಂದರವಾಗಲಿದೆ.ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಕಂಡ ಮಹತ್ವದ ಕನಸುಗಳಲ್ಲಿ ಸ್ವಚ್ಛತೆ ನಿರ್ವಹಣೆಯು ಕೂಡಾ ಒಂದಾಗಿತ್ತು. ಪ್ರತಿಯೊಬ್ಬರು ಸ್ವಚ್ಛತೆಯ ಅರಿವು ಹೊಂದಬೇಕು. ನಿರುಪಯುಕ್ತ ವಸ್ತುಗಳನ್ನು ಎಲ್ಲೆಂದರಲ್ಲಿ ಬಿಸಾಡದೆ ಕಸದ ಬುಟ್ಟಿಯಲ್ಲಿ ಹಾಕಬೇಕು ಎಂದರು
ನೆಹರು ಯುವ ಕೇಂದ್ರದ ಎನ್ ವೈ ವಿ ಗಿರೀಶ್ ಎಂ ಸಿ ಮಾತನಾಡಿ ಸ್ವಚ್ಛತೆಯನ್ನು ನಿತ್ಯಜೀವನದ ಅವಿಭಾಜ್ಯ ಅಂಗವಾಗಿಸಿಕೊಂಡಾಗ ಮಾತ್ರ ರೋಗಮುಕ್ತ ಜೀವನ ನಡೆಸಲು ಸಾಧ್ಯ ಹಾಗಾಗಿ ನೆಹರು ಯುವ ಕೇಂದ್ರದಿಂದ ಗ್ರಾಮಮಟ್ಟದಲ್ಲಿ ಮನೆ ಮನೆಗೆ ತೆರಳಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಿ ಪ್ಲಾಸ್ಟಿಕ್ ಮುಕ್ತ ಆರೋಗ್ಯವಂತ ಪರಿಸರ ನಿರ್ಮಾಣಕ್ಕೆ ಮುಂದಾಗಬೇಕು ಎಂದರು
ಶ್ರಮದಾನ ಮಾಡುವ ಮೂಲಕ ಶಾಲಾ ಆವರಣವನ್ನು ಸ್ವಚ್ಛಗೊಳಿಸಲಾಯಿತು .
: ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ತಿಪ್ಪೂರಿನ ಬಸವೇಶ್ವರ ಪ್ರೌಢಶಾಲೆಯಲ್ಲಿ ನೆಹರು ಯುವ ಕೇಂದ್ರ ತುಮಕೂರು ಇವದ ಸಹಯೋಗದಲ್ಲಿ ಆಯೋಜಿಸಿದ್ದ ಆಜಾದಿ ಕಾ ಅಮೃತ ಮಹೋತ್ಸವದ ಹಿನ್ನೆಲೆ ಸ್ವಚ್ಛ ಭಾರತ 2.0 ಕಾರ್ಯಕ್ರಮಕ್ಕೆ ತಿಪ್ಪೂರು ಬಸವೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿಶ್ವನಾಥ್ ಚಾಲನೆ ನೀಡಿದರು