ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದ ಗ್ರಾಮಸ್ಥರು ಮತ್ತು ಅಭಿಮಾನಿಗಳು ಕರ್ನಾಟಕ ರತ್ನ,ರಾಜರತ್ನ ಸಮಾಜಮುಖಿ ಕಾರ್ಯಗಳಲ್ಲಿ ಸದಾ ತನ್ನನ್ನು ಅರ್ಪಿಸಿಕೊಂಡಿದ್ದ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮೊದಲ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಅತ್ಯಂತ ಭಕ್ತಿಪೂರ್ವಕವಾಗಿ ಆಚರಿಸಿದರು.
ಅತಿ ಚಿಕ್ಕ ವಯಸ್ಸಿನಲ್ಲಿಯೇ ಬಹುದೊಡ್ಡ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿ ಸಾಧನೆಗೈದ ಮಹನೀಯ ಕರ್ನಾಟಕ ರತ್ನ,ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಾವಿನಿಂದ ಇಡಿ ವಿಶ್ವವೇ ಕಂಬನಿಯನ್ನು ಮಿಡಿದಿತ್ತು,ಪ್ರತಿ ಹಳ್ಳಿಯಲ್ಲಿಯೂ ಸಹ ದೇವರಂತೆಯೇ ಪುನೀತ್ ರಾಜಕುಮಾರ್ ರವರನ್ನು ಅವರ ಅಭಿಮಾನಿಗಳು ಪೂಜಿಸಿ ಆರಾಧಿಸುತ್ತಿದ್ದರು. ಸಮಾಜಮುಖಿ ಕಾರ್ಯಗಳಲ್ಲಿ ಅಪ್ಪು ನಡೆದು ಬಂದಂತೆ ರಾಜ್ಯದ ಸಾವಿರಾರು ಸಂಘಟನೆಗಳು ಸಾವಿರಾರು ಸಂಘ ಸಂಸ್ಥೆಗಳು ಪುನೀತ್ ರಾಜಕುಮಾರ್ ರವರ ಹೆಸರಿನಲ್ಲಿ ಕಳೆದ ಒಂದು ವರ್ಷಗಳಿಂದ ಸಾವಿರಾರು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದರು.
ಅದರಂತೆ ಇಂದಿಗೆ ರಾಜರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಅವರ ಅಪಾರ ಅಭಿಮಾನಿಗಳನ್ನು ಅಗಲಿ ಒಂದು ವರ್ಷ ಕಳೆಯಿತು ಆದಕಾರಣ ನೇಗಲಾಲ ಗ್ರಾಮದ ಅಭಿಮಾನಿಗಳು ಮತ್ತು ಗ್ರಾಮಸ್ಥರು ಭಕ್ತಿ ಪೂರ್ವಕವಾದ ನಮನಗಳನ್ನು ಸಲ್ಲಿಸಿ ಸರ್ಕಾರಿ ಶಾಲೆಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಮಾಡುವುದರ ಮೂಲಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಭಕ್ತಿ ಪೂರ್ವಕವಾದ ನಮನಗಳನ್ನು ಸಲ್ಲಿಸಿದರು…
ಗ್ರಾಮದ ಅಪ್ಪು ಅಪ್ಪಟ ಅಭಿಮಾನಿಗಳಾದ ರವೀಶ್, ಮಹೇಶ್,ಶ್ರೀಧರ್,ನವೀನ್, ಪ್ರದೀಪ್,ಮಂಜುನಾಥ್, ಲೋಕೇಶ್,ಪುಟ್ಟರಾಜು,ರಾಜು, ರವಿಕುಮಾರ್,ಮತ್ತು ಅಭಿಮಾನಿಗಳು,ಗ್ರಾಮಸ್ಥರು ಸಾರ್ವಜನಿಕರು ಹಾಜರಿದ್ದರು.