ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ: ರಸ್ತೆ ಸುರಕ್ಷತೆಯ ಕಾನೂನು ಅರಿವು

ಕೊರಟಗೆರೆ :- ಪಟ್ಟಣದ ಎಸ್ ಎಸ್ ಆರ್ ವೃತ್ತದಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಿಕ ಆಚರಣೆಯ ಪ್ರಯುಕ್ತ ಕಾನೂನು ಅರಿವು ಕಾರ್ಯಕ್ರಮದ ಅಡಿಯಲ್ಲಿ ಡಿವೈಎಸ್ಪಿ ವೆಂಕಟೇಶ್ ನಾಯ್ಡು ಸಿಪಿಐ ಸುರೇಶ್ ಪಿ ಎಸ್ ಐ ಚೇತನ್ ಕುಮಾರ್ ,ಕೋಳಾಲ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಮಹಾಲಕ್ಷ್ಮಿ ಸೇರಿದಂತೆ ತಮ್ಮ ಇಲಾಖೆಯ 60 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು …

ಡಿವೈಎಸ್ ಪಿ ವೆಂಕಟೇಶ್ ನಾಯ್ಡು ಮಾತನಾಡಿ .:

ಪ್ರತಿಯೊಬ್ಬ ವ್ಯಕ್ತಿಯೂ ಅವರ ಕುಟುಂಬದ ಆಧಾರ ಸ್ತಂಭವಾಗಿರುತ್ತಾರೆ ಪ್ರತಿ ಜೀವಕ್ಕೂ ಬೆಲೆಯಿದೆ ಆದ್ದರಿಂದ ವಾಹನ ಸವಾರರು ತಮ್ಮ ಮನೆಯಿಂದ ಹೊರಡುವಾಗಲೇ ಹೆಲ್ಮೆಟ್ ಧರಿಸಿಕೊಂಡು ಸಂಚಾರ ಮಾಡುವುದು ಕಡ್ಡಾಯವಾಗಿದೆ ..

ದ್ವಿಚಕ್ರ ವಾಹನ ಸವಾರರಿಗೆ ದಂಡ ವಿಧಿಸುವುದು ನಮ್ಮ ಕೆಲಸವಲ್ಲ ಸಾವಿರಾರು ಸಂಖ್ಯೆಯಲ್ಲಿ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ಜೀವ ಕಳೆದುಕೊಂಡಿದ್ದಾರೆ ಅವರ ಕುಟುಂಬಗಳು ಇಂದು ಪಡಬಾರದ ಕಷ್ಟ ಪಡುತ್ತಿದ್ದಾರೆ ಆದ್ದರಿಂದ ಜೀವದ ರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿರುತ್ತದೆ
ಆದ್ದರಿಂದ ದಯವಿಟ್ಟು ಎಲ್ಲಾ ಸಾರ್ವಜನಿಕರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ಎಂದು ತಿಳಿಸಿದರು..
ಸರ್ಕಲ್ ಇನ್ಸ್ ಪೆಕ್ಟರ್ ಸುರೇಶ್ ಮಾತನಾಡಿ :- ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದೆ ತಮ್ಮ ಜೀವವನ್ನೇ ಕಳೆದುಕೊಳ್ಳುತ್ತಿದ್ದಾರೆ ನಾವು ಕಂಡಂತಹ ಅನೇಕ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸಿದೇ ವಾಹನ ಸವಾರರು ಪ್ರಾಣ ಕಳೆದುಕೊಂಡಿದ್ದಾರೆ ಆದ್ದರಿಂದ ಪ್ರತಿಯೊಬ್ಬರು ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ಎಂದು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು ..

ಇತ್ತೀಚಿನ ದಿನಗಳಲ್ಲಿ ಕೆಲವು ಯುವಕರು ಬೈಕ್ ವ್ಹೀಲಿಂಗ್ ಮಾಡಲು ಹೋಗಿ ಪ್ರಾಣವನ್ನು ಕಳೆದುಕೊಳ್ಳುವ ಎಷ್ಟೋ ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇವೆ ದಯಮಾಡಿ ಪೋಷಕರು ತಮ್ಮ ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕು ತಮ್ಮ ಮನೆಯಿಂದ ಹೊರಡುವಾಗ ಹೆಲ್ಮೆಟ್ ಕಡ್ಡಾಯವಾಗಿ ಕರೆಸಿಕೊಂಡಿದೆ ದ್ವಿಚಕ್ರ ವಾಹನ ಚಾಲನೆ ಮಾಡಬೇಕು ಯಾವುದೇ ತುರ್ತು ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಬೇಕಾದಲ್ಲಿ 112 ಗೆ ಕರೆ ಮಾಡಿ ಮಾಹಿತಿ ನೀಡಿ ದಿನದ 24ಗಂಟೆಯಲ್ಲಿ ಯಾವುದೇ ಸಮಯದಲ್ಲಾದರೂ ಅಪಘಾತವಾದ ಸ್ಥಳದಲ್ಲಿ ಯಾರಾದರೂ ಸಾರ್ವಜನಿಕರಿದ್ದರೆ ಮೊದಲು ಅಪಘಾತವಾದ ವ್ಯಕ್ತಿಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕೆಲಸ ಮಾಡಿ ನಿಮ್ಮ ಮೇಲೆ ಯಾವುದೇ ಕಾನೂನು ಕ್ರಮ ತೆಗೆದುಕೊಳ್ಳುವುದಿಲ್ಲ ಭಯಪಡದೆ ಸಹಾಯ ಮಾಡಿ

ಹೆಲ್ಮೆಟ್ ಕಡ್ಡಾಯ ಜಾಥಾ ಕಾರ್ಯಕ್ರಮದಲ್ಲಿ ಕೊರಟಗೆರೆ ತಾಲ್ಲೂಕಿನ ಎಲ್ಲ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದ್ವಿಚಕ್ರ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಹಾಜರಿದ್ದರು

ವರದಿ :- ಹರೀಶ್ ಬಾಬು ಬಿ.ಹೆಚ್ ಕೊರಟಗೆರೆ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!