ಕೊರಟಗೆರೆ : ತಾಲ್ಲೂಕಿನ ಕಸಬಾ ಹೋಬಳಿಯ ತುಂಬಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೆಮ್ಮೆದೇವರಹಳ್ಳಿ ಗ್ರಾಮದಲ್ಲಿ ಕೊರಟಗೆರೆ ತಾಲ್ಲೂಕು ಕಂದಾಯ ಇಲಾಖೆಯ ವತಿಯಿಂದ ಇಂದು ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು..
ಸರ್ಕಾರಿ ಶಾಲಾ ಮಕ್ಕಳಿಂದ ಪ್ರಾರ್ಥನೆ ಗೀತೆ ಹಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ತಹಶೀಲ್ದಾರ್ ನಾಹಿದಾ ಜಮ್ ಜಮ್ ರವರು ದೀಪ ಬೆಳಗುವುದರ ಮೂಲಕವನ್ನು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಂತರ ಮಾತನಾಡಿದ ತಹಶೀಲ್ದಾರ್ ನಾಹಿದಾ ಜಮ್ ಜಮ್ ಸರ್ಕಾರದ ಸವಲತ್ತುಗಳಾದ ಪಿಂಚಣಿ,ಆರೋಗ್ಯ ಕಾರ್ಡ್ ಸೇರಿದಂತೆ , 72 ಗಂಟೆಗಳಲ್ಲಿ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ಗ್ರಾಮದ ಫಲಾನುಭವಿಗಳಿಗೆ ತಲುಪಿಸುವುದು,ನವೋದಯ ಮೊಬೈಲ್ ಅಪ್ ಮೂಲಕ ಪಿಂಚಣಿ ಪಡೆಯಬಹುದು ಆದೇಶ ಪತ್ರವನ್ನು ಪಾಲನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಕಾರ್ಯ ಮಾಡಲಾಗುವುದು.ಮತದಾರರ ನೋಂದಣಿ ಬಗ್ಗೆ ಅರಿವು ಮೂಡಿಸಿ ಗ್ರಾಮ ಒನ್ ಸೇವಾ ಕೇಂದ್ರದಲ್ಲಿ ಅನೇಕ ಸಮಸ್ಯೆಗಳು ತಾವು ತಮ್ಮ ಗ್ರಾಮದಲ್ಲಿಯೇ ಬಗೆಹರಿಸಿಕೊಳ್ಳಬಹುದು ಇದರಿಂದ ಗ್ರಾಮದಿಂದ ತಾಲ್ಲೂಕು ಪಂಚಾಯಿತಿಗೆ ಸಾರ್ವಜನಿಕರು ಅಲೆದಾಡುವುದು ತಪ್ಪುತ್ತದೆ ಎಂದು ತಿಳಿಸಿದರು ..
ತಹಶೀಲ್ದಾರ್ ನಾಹಿದಾ ಜಮ್ ಜಮ್ ..
ಇದೇ ಸಂದರ್ಭದಲ್ಲಿ ಗ್ರಾಮದ ಸುಮಾರು 26 ಜನ ವೃದ್ಧರಿಗೆ ಹೊಸದಾಗಿ ಪಿಂಚಣಿ ಪಡೆಯಲು ಅರ್ಜಿ ಸಲ್ಲಿಸಿದರು,ನಾಲ್ಕು ಜನ ಪಿಂಚಣಿದಾರರ ದಾಖಲಾತಿಯನ್ನು ತಿದ್ದುಪಡಿ ಮಾಡಲಾಯಿತು.ಸುಮಾರು 15ಜನ ವೃದ್ಧರಿಗೆ ಸ್ಥಳದಲ್ಲೇ ಪಿಂಚಣಿ ಮಂಜೂರಾತಿ ಆದೇಶ ಪತ್ರವನ್ನು ನೀಡಿದ ತಹಶೀಲ್ದಾರ್ ರವರ ಕೆಲಸವನ್ನು ಸ್ಥಳೀಯ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು ..
ಇದೇ ಸಂದರ್ಭದಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ಅಧಿಕಾರಿಗಳಾದ ,ಪ್ರತಾಪ್ ,ಪವನ್ ಕುಮಾರ್ ,ಬಸವರಾಜು ,ರಾಘವೇಂದ್ರ ,ಪೂರ್ಣಿಮಾ , ಭವ್ಯ ,ಮೀನಾ ಸೇರಿದಂತೆ ಗ್ರಾಮ ಪಂಚಾಯಿತಿಯ ಸದಸ್ಯರು ಹಾಗೂ ಸಾರ್ವಜನಿಕರು ಹಾಜರಿದ್ದರು …
ವರದಿ :- ಹರೀಶ್ ಬಾಬು ಬಿ.ಹೆಚ್ ಕೊರಟಗೆರೆ