: ಬಾದಾಮಿ: ಚಾಲುಕ್ಯರ ನಾಡು ಬಾದಾಮಿಯಲ್ಲಿ ಆಮ್ ಆದ್ಮಿ ಪಕ್ಷದ ಸದಸ್ಯತ್ವ ಅಭಿಯಾನ ನೋಂದಣಿ ಕಾರ್ಯಾಗಾರ ಭರದಿಂದ ಸಾಗಿತು.
ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಮುಖ್ಯ ಮಾರುಕಟ್ಟೆಯಲ್ಲಿ ಇಂದು ಆಮ್ ಆದ್ಮಿ ಪಕ್ಷಕ್ಕೆ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಆಮ್ ಆದ್ಮಿ ಪಕ್ಷದ ಬಾದಾಮಿ ಮತಕ್ಷೇತ್ರದ ಸಂಯೋಜಕರಾದ ಮಲ್ಲಿಕಾರ್ಜುನ ಕಲಾದಗಿ ಅವರು ಆಮ್ ಆದ್ಮಿ ಪಕ್ಷ ದ ಸಂಸ್ಥಾಪಕ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ದೆಹಲಿಯಲ್ಲಿನ ಜನಪರ ಆಡಳಿತಗಳ ಉಚಿತ ಶಿಕ್ಷಣ, ಆರೋಗ್ಯಕ್ಕೆ ಸಂಬಂಧಪಟ್ಟಂತೆ ಉಚಿತ ಸುಸಜ್ಜಿತ ವೈದ್ಯಕೀಯ ವ್ಯವಸ್ಥೆ,ಕುಡಿಯುವ ನೀರು ಸೇರಿದಂತೆ, ಹಲವಾರು ಯೋಜನೆಗಳು ಹಾಗೂ ಇತ್ತೀಚೆಗೆ ಕಟ್ಟಡ ಕಾರ್ಮಿಕರಿಗೆ 5000 ರೂಪಾಯಿ ಆರ್ಥಿಕ ನೆರವು ಘೋಷಣೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಜನಸಾಮಾನ್ಯರಿಗೆ ಕೊಟ್ಟಿರುವ ಅರವಿಂದ ಕೇಜ್ರಿವಾಲ್ ಅವರ ಸಾರಥ್ಯದ ಆಮ್ ಆದ್ಮಿ ಪಕ್ಷ ದ ಪೊರಕೆ ಗುರುತಿನ ತಾಕತ್ತಿನ ಬಗ್ಗೆ ಸವಿಸ್ತಾರವಾಗಿ ವಿವರಣೆ ನೀಡಿ ಜನರು ತಾವೇ ಸ್ವ ಇಚ್ಛೆಯಿಂದ ಪಕ್ಷಕ್ಕೆ ಸದಸ್ಯತ್ವ ನೋಂದಣಿ ಮಾಡಿಸಿಕೊಂಡು ಪಕ್ಷಕ್ಕೆ ಸೇರ್ಪಡೆ ಯಾಗಿ ಬೆಂಬಲ ವ್ಯಕ್ತಪಡಿಸಿದರು.
ಒಟ್ಟಾರೆಯಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಚಾಲುಕ್ಯರ ನಾಡು ಬಾದಾಮಿಯಲ್ಲಿ ಆಮ್ ಆದ್ಮಿ ಪಕ್ಷದ ಕಹಳೆಯನ್ನು ಮೊಳಗಿಸಿದ್ದಾರೆ.
ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ