ಬಾದಾಮಿ:
ಕೆ.ಪಿ.ಸಿ.ಸಿ (ಹಿಂ.ವ.ವಿ) ರಾಜ್ಯ ಕಾರ್ಯದರ್ಶಿ ಮಹೇಶ ಎಸ್ ಹೊಸಗೌಡ್ರ ಅವರು
2023 ರ ಸಾರ್ವತ್ರಿಕ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಲಾಯಿತು.
ಸಾರ್ವತ್ರಿಕ ಚುನಾವಣೆ 2023ರ ವಿಧಾನಸಭಾ ಚುನಾವಣೆಗೆ ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಬಾದಾಮಿ ವಿಧಾನಸಭಾ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಸಿದ್ದರಾಮಯ್ಯನವರ ಸಲಹೆ ಮೇರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಛೇರಿ ಕಾರ್ಯದರ್ಶಿಗಳಾದ ಶ್ರೀ ನಾರಾಯಣ ಅವರಿಗೆ ಮುಖಂಡರ ಜೊತೆ ಕೆಪಿಸಿಸಿ (ಹಿಂ.ವ.ವಿ) ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಮಹೇಶ ಎಸ್ ಹೊಸಗೌಡ್ರ ಅವರು ಅರ್ಜಿ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಸುಧೀಂದ್ರ ಹುನ ಗುಂಡಿ, ವಿಶ್ವನಾಥ ಪಾಟೀಲ ಕಾಂಗ್ರೆಸ್ ಪಕ್ಷದ ಹಲವು ಹಿರಿಯ ಮುಖಂಡರು ಉಪಸ್ಥಿತರಿದ್ದರು.
ವರದಿ:- ರಾಜೇಶ್.ಎಸ್.ದೇಸಾಯಿ ಬಾದಾಮಿ