ನ.18 ರಂದು ಗೊರವಹಳ್ಳಿ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಲಕ್ಷದೀಪೋತ್ಸವ

ಕೊರಟಗೆರೆ ;- ರಾಜ್ಯದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಶ್ರೀಕ್ಷೇತ್ರ ತಾಲೂಕಿನ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯದಲ್ಲಿ ಕಾತೀಕ ಮಾಸದ ಅಂಗವಾಗಿ ನ.18 ರಂದು ಶುಕ್ರವಾರ ಲಕ್ಷದೀಪೋತ್ಸವ, ಬ್ರಹ್ಮರಥೋತ್ಸವ ಹಾಗೂ ಮುತ್ತಿನ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್ ನ ಅಧ್ಯಕ್ಷ ಬಿ.ಜಿ.ವಾಸುದೇವ ತಿಳಿಸಿದ್ದಾರೆ.

ಅವರು ಪತ್ರಿಕಾ ಪ್ರಕಟಣೆ ನೀಡಿ ತಾಲೂಕಿನ ಗೊರವನಹಳ್ಳಿ ಪವಿತ್ರ ಶ್ರೀಕ್ಷೇತ್ರ ಶ್ರೀ ಮಹಾಲಕ್ಷ್ಮಿ ದೇವಾಲಯದಲ್ಲಿ ಶ್ರೀ ಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿ ವರ್ಷದಂತೆ ಕಾತೀಕ ಮಾಸದ ಕಡೇ ದಿನವಾದ ನ.18 ರಂದು ಶುಕ್ರವಾರ ಶ್ರೀಮಹಾಲಕ್ಷ್ಮಿ ದೇವಾಲಯದಲ್ಲಿ ಲಕ್ಷದೀಪೋತ್ಸವ ಏರ್ಪಡಿಸಲಾಗಿದ್ದು ದೀಪೋತ್ಸವದ ಅಂಗವಾಗಿ ದೇವಿಗೆ ವಿಶೇಷ ಪೂಜೆ ಹೂವಿನ ಅಲಂಕಾರದೊಂದಿಗೆ ದೇವಾಲಯಕ್ಕೆ ವಿದ್ಯುತ್ ದೀಪಾಲಂಕಾರ ಹಾಗೂ ವಿವಿದ ಕಲಾತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು ಬೆಳಿಗ್ಗೆ 6-30 ಕ್ಕೆ ಶ್ರೀ ಮಹಾಲಕ್ಷ್ಮಿ ದೇವಿಗೆ ಪಂಚಾಮೃತ ಅಭಿಷೇಕ, ಹೋಮ-ಹವನ, ಮದ್ಯಾಹ್ನ 12-35 ಗಂಟೆಗೆ ಬ್ರಹ್ಮರತೋತ್ಸವ, ಸಂಜೆ 6 ಗಂಟೆಗೆ ಲಕ್ಷದೀಪೋತ್ಸವ, ರಾತ್ರಿ 7 ಗಂಟೆಗೆ ಗೊರವನಹಳ್ಳಿ ನರಸಯ್ಯನಪಾಳ್ಯ, ಗೊಲ್ಲರಹಟ್ಟಿ ಗ್ರಾಮಸ್ಥರಿಂದ ಮಹಾಲಕ್ಷ್ಮಿ ದೇವಿಗೆ ಆರತಿ ಸೇವೆ ಹಾಗೂ ರಾತ್ರಿ 8 ಗಂಟೆಗೆ ಮುತ್ತಿನ ಪಲ್ಲಕ್ಕಿ ಉತ್ಸವ ಏರ್ಪಡಿಸಲಾಗಿ ದ್ದು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿ ದೇವಿಯ ದರ್ಶನ ಪಡೆದು ತಾಯಿಯ ಕೃಪೆಗೆ ಪಾತ್ರರಾಗಬೇಕೆಂದು ಕೋರಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!