ಎಂ ಎನ್ ಕೋಟೆ : ಗುಬ್ಬಿಯಲ್ಲಿ ಕಾಂಗ್ರೆಸ್ ಅಲೆ ಬೀಸಿದ್ದು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಜಿ.ಎಸ್.ಪ್ರಸನ್ನ ಕುಮಾರು ವಿಶ್ವಾಸ ವ್ಯಕ್ತಪಡಿಸಿದರು.
ಗುಬ್ಬಿ ತಾಲ್ಲೂಕಿನ ಕಾಂಗ್ರೆಸ್ ಅಭ್ಯರ್ಥಿಯಾಗಿ ಬೆಂಗಳೂರಿನ ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿಯ ಕಛೇರಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಟಿಕೇಟ್ ಗಾಗಿ ಮಂಗಳವಾರ ಅರ್ಜಿಯನ್ನು ಸಲ್ಲಿಸಿ ನಂತರ ಮಾತನಾಡಿದ ಅವರು ಗುಬ್ಬಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಹೆಚ್ಚು ಒಲವನ್ನು ಕಾರ್ಯಕರ್ತರು ತೋರಿಸುತ್ತಿದ್ದು ಈ ಭಾರಿ ಗುಬ್ಬಿಯಲ್ಲಿ ಕಾಂಗ್ರೆಸ್ ಶಾಸಕರನ್ನಾಗಿ ಮಾಡಲು ಮತದಾರರು ತಿರ್ಮಾನ ಮಾಡಿದ್ದು ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ರಾಜ್ಯದಲ್ಲಿ ಜನಪರ ಕೆಲಸಗಳನ್ನು ಮಾಡಿದ್ದು ಈ ಭಾರಿ ಬುಹುತೇಕ ಕಾಂಗ್ರೇಸ್ ಅಧಿಕಾರಕ್ಕೆ ಬರಲಿದ್ದು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಧೃಢವಾಗಬೇಕು ಎಂದ ಅವರು ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ ನಮ್ಮಲ್ಲಿ ಯಾರಿಗೆ ಟೀಕೆಟ್ ನೀಡಿದರು ಗೆಲ್ಲಿಸಿಕೊಂಡು ಬರುತ್ತೇವೆ ಎಂದ ಅವರು ತಾಲ್ಲೂಕಿನಲ್ಲಿ ಎಲ್ಲ ಸಮುದಾಯದ ಅಲೆ ಕಾಂಗ್ರೆಸ್ ಪಕ್ಷದ ಕಡೆ ಇರುವುದರಿಂದ ಗುಬ್ಬಿಯಲ್ಲಿ ಕಾಂಗ್ರೆಸ್ ಶಾಸಕರು ಈ ಭಾರಿ ಆಯ್ಕೆಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಖಂಡ ಹೆಚ್ ಎಂ ಉಮಾ ಶಂಕರ್ ಮಾತನಾಡಿ ಗುಬ್ಬಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್.ಪ್ರಸನ್ನ ಕುಮಾರು ಹೆಸರು ಕೇಳಿ ಬರುತ್ತಿದ್ದು ಎಲ್ಲ ಸಮಾಜದ ಮತದಾರರು ಪಕ್ಷಾತೀತವಾಗಿ ಪ್ರಸನ್ನ ಕುಮಾರು ಅವರಿಗೆ ಟಿಕೇಟ್ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯ ಮಾಡುತ್ತಿದ್ದಾರೆ ಈ ಭಾರಿ ಕಾಂಗ್ರೆಸ್ ಹೈಕಮಾಂಡ್ ಗುಬ್ಬಿಯಲ್ಲಿ ಪ್ರಸನ್ನ ಕುಮಾರು ಅವರಿಗೆ ಟಿಕೇಟ್ ನೀಡಿದ್ದಾರೆ ಗುಬ್ಬಿಯಲ್ಲಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಹೊನ್ನಗಿರಿಗೌಡ , ಶಶಿಕಿರಣ್ , ನರಸಿಂಹಯ್ಯ , ತಾತಯ್ಯ , ಗಂಗಾಧರ್ , ಹೇಮಂತ್ ,ಸಿದ್ದೇಶ್ ,ಶಿವು ಭಾಗವಹಿಸಿದ್ದರು.