ನವಂಬರ್ 26ರಂದು ಶ್ರೀ ರಾಜ ವೀರ ಮದಕರಿ ನಾಯಕರ ಜಯಂತ್ಯೋತ್ಸವ

ತುಮಕೂರು: ಶ್ರೀ ರಾಜ ವೀರ ಮದಕರಿ ನಾಯಕರ ಜಯಂತ್ಯೋತ್ಸವ ಆಚರಣಾ ಸಮಿತಿ ವತಿಯಿಂದ ನವೆಂಬರ್ 26 ರಂದು ಮಧ್ಯಾಹ್ನ 12 ಗಂಟೆಗೆ ನಗರದ ಅಮಾನಿಕೆರೆ ಗಾಜಿನ ಮನೆಯಲ್ಲಿ ರಾಜ ವೀರ ಮದಕರಿ ನಾಯಕರ ರಾಜ್ಯಮಟ್ಟದ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಧನುಷ್ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರುನಾಡನ್ನು ಆಳಿದ ಪ್ರಮುಖರಲ್ಲಿ ವೀರ ಮದಕರಿ ನಾಯಕ ಅಗ್ರಸ್ಥಾನದಲ್ಲಿದ್ದು, ಇವರ ಜಯಂತ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ರಾಜ ವೀರಮದಕರಿ ನಾಯಕರ ಜಯಂತ್ಯೋತ್ಸವ ರಾಜ್ಯ ಮಟ್ಟದ ಕಾರ್ಯಕ್ರಮ ತುಮಕೂರಿನಲ್ಲಿ ನಡೆಯುತ್ತಿರುವುದರಿಂದ ಈ ಕಾರ್ಯಕ್ರಮಕ್ಕೆ ಸುಮಾರು 5ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಮುದಾಯದ ನಾಲ್ವರು ಪುರುಷ ಮತ್ತು ಓರ್ವ ಮಹಿಳಾ ಸಾಧಕರು ಸೇರಿ ಐವರಿಗೆ ವೀರ ಮದಕರಿ ನಾಯಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದರು.

ಈ ಕಾರ್ಯಕ್ರಮವನ್ನುಸಾರಿಗೆಸಚಿವಶ್ರೀರಾಮುಲು ಉದ್ಘಾಟಿಸಲಿದ್ದು, ಕೆಪಿಸಿಸಿಪ್ರಧಾನ ಕಾರ್ಯದರ್ಶಿಸತೀಶ್ ಜಾರಕಿಹೊಳಿ, ಸಂಸದ ಜಿ.ಎಸ್. ಬಸವರಾಜು, ಮಾಜಿ ಉಪಮುಖ್ಯಮಂತ್ರಿ ಹಾಗೂ ಕೊರಟಗೆರೆ ಶಾಸಕರಾದ ಡಾ.ಜಿ.ಪರಮೇಶ್ವರ್, ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್, ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಮಾಜಿ ಸಚಿವ ಟಿ.ಬಿ.ಜಯಚಂದ್ರ, ತುಮಕೂರು ಗ್ರಾಮಾಂತರ ಮಾಜಿ ಶಾಸಕ ಬಿ.ಸುರೇಶ್‌ಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರು ಭಾಗವಹಿಸಲಿದ್ದು, ಮಾಜಿ ಶಾಸಕರು ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಕೆ.ಎನ್.ರಾಜಣ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಖ್ಯಾತ ಇತಿಹಾಸ ಸಂಶೋಧಕರಾದ ಧರ್ಮೇಂದ್ರ ಕುಮಾರ್ ಅವರು ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮಕ್ಕೂಮುನ್ನನವೆಂಬರ್ 26 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಬಿಜಿಎಸ್ ವೃತ್ತದಿಂದ ಅಮಾನಿಕೆರೆ ಗಾಜಿನ ಮನೆಯವರೆಗೂ ವಿವಿಧ ಕಲಾ ತಂಡಗಳೊಂದಿಗೆ ರಾಜ ವೀರ ಮದಕರಿ ನಾಯಕರ ಭಾವಚಿತ್ರದ ಮೆರವಣಿಗೆ ವೈಭವಯುತವಾಗಿ ನಡೆಯಲಿದ್ದು, ಈ ಮೆರವಣಿಗೆಗೆ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ ನೀಡುವರು. ವಾಲ್ಮೀಕಿ ಹಾಗೂ ರಾಜ ವೀರ ಮದಕರಿ ನಾಯಕರ ಸ್ಥಬ್ದ ಚಿತ್ರಗಳ ಮೆರವಣಿಗೆಯೂ ನಡೆಯಲಿದೆ ಎಂದು ಹೇಳಿದರು.

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾಸಮುದಾಯದನಾಯಕರು, ಸಾರ್ವಜನಿಕರುಹೆಚ್ಚಿನಸಂಖ್ಯೆಯಲ್ಲಿಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಧನುಷ್ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರಾಜ ವೀರ ಮದಕರಿ ನಾಯಕರ ಜಯಂತ್ಯೋತ್ಸವ ಆಚರಣಾ ಸಮಿತಿಯ ಸಂಚಾಲಕರಾದ ಚಳುವಳಿ ರಾಜಣ್ಣ, ಲಕ್ಷ್ಮಣಪ್ಪ, ಜಿ.ಎಸ್.ಪ್ರಕಾಶ್, ಭರತ್‌ರಾಜ್, ಕುಪ್ಪೂರು ಶ್ರೀಧರ್, ಬಾಲರಾಜ್, ರಂಗನಾಥ್, ರವಿ, ಮಂಜು, ಕೃಷ್ಣ, ಸೇರಿದಂತೆ ಹಲವರು ಭಾಗವಹಿಸಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!