ಮಕ್ಕಳ ಭವಿಷ್ಯ ರೂಪಿಸುವಲ್ಲಿ ಎಲ್ಲರೂ ಜಾಗೃತರಾಗಬೇಕು – ಡಾ.ಫರ್ಹಾನ ಬೇಗಂ

ತುಮಕೂರು: ಮಕ್ಕಳ ಭವಿಷ್ಯ ರೂಪಿಸುವಲ್ಲಿ ಪ್ರತಿಯೊಬ್ಬ ಪೋಷಕರು ಜಾಗೃತರಾಗಬೇಕು ಎಂದು ಕಾಂಗ್ರೆಸ್ ಮುಖಂಡೆ ಡಾ.ಫರ್ಹಾನ ಬೇಗಂ ತಿಳಿಸಿದರು.

ತುಮಕೂರಿನ ಕನ್ನಡ ಭವನದಲ್ಲಿ ಕರ್ನಾಟಕ ಲೇಖಕಿಯರ ಸಂಘದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ, ಕವಿಗೊಷ್ಟಿ, ಹಾಗೂ ಉರ್ದು ಶಾಲಾ ಮಕ್ಕಳ ಕನ್ನಡ ಪ್ರಭಂಧ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಕ್ಕಳು ಈ ದೇಶದ ಆಸ್ತಿ ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಮಕ್ಕಳ ಬೆಳವಣಿಗೆಯನ್ನು ಚಿಕ್ಕ ವಯಸ್ಸಿನಲ್ಲೇ ರೂಪಿಸಬೇಕು ಆ ನಿಟ್ಟಿನಲ್ಲಿ ಪೋಷಕರು ಹೆಚ್ಚಿನ ಗಮನಹರಿಸಬೇಕು ಆಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪುಗೊಳುತ್ತಾರೆ ಆಗಾಗಿ ಪೋಷಕರು ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಜಾಗೃತರಾಗಬೇಕು ಎಂದರು.
ಈ ಸಂದರ್ಭದಲ್ಲಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಶ್ರೀಮತಿ ಜಿ.‌ ಮಲ್ಲಿಕಾ ಬಸವರಾಜು, ಲೇಖಕಿಯರಾದ ಶ್ರೀಮತಿ ಪ್ರೇಮಾ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಡಾ. ಟಿ.ಆರ್ ಲೀಲಾವತಿ, ತುಮಕೂರು ವಿವಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಗೀತಾ ವಸಂತ, ಮಕ್ಕಳ ವೈದ್ಯರಾದ ಡಾ.ರಜನಿ ಹಾಗೂ ಕನ್ನಡ ಕಲಾಭಿಮಾನಿಗಳು, ಸಾಹಿತಿಗಳು ಭಾಗವಹಿಸಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!