ನಾಳೆ ತುಮಕೂರಿಗೆ ಹೆಚ್‌.ಡಿ ಕುಮಾರಸ್ವಾಮಿ ಪಂಚರತ್ನ ರಥಯಾತ್ರೆಗೆ ಜೆಡಿಎಸ್ ಸಜ್ಜು

ತುಮಕೂರು : ಜೆಡಿಎಸ್ ಪಕ್ಷವನ್ನು 2023ರ ಚುನಾವಣೆಯಲ್ಲಿ ಅಧಿಕಾರಕ್ಕೆ ತರಲೇಬೇಕೆಂದು ಹೋರಾಟ ಮಾಡುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ನಾಳೆ ತುಮಕೂರು ಜಿಲ್ಲೆಗೆ ಆಗಮಿಸಲಿದ್ದಾರೆ.

ರಾಜ್ಯದ ಜನರಿಗೆ ಅವಶ್ಯವಿರುವ ಸೌಕರ್ಯಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಪಂಚರತ್ನ ಯೋಜನೆಯನ್ನು ರೂಪಿಸಿ ರಾಜ್ಯವ್ಯಾಪಿ ಜೆಡಿಎಸ್ ರಥಯಾತ್ರೆಯ ಮೂಲಕ ಜನರ ಬಳಿಗೆ ತೆರಳುತ್ತಿದ್ದು,ಈಗಾಗಲೇ 12 ದಿನಗಳ ಕಾಲ ಪಂಚರತ್ನ ರಥಯಾತ್ರೆ ಯಶಸ್ವಿಯಾಗಿ ಸಾಗಿದೆ.ತುಮಕೂರು ಜಿಲ್ಲೆಗೆ ಡಿಸೆಂಬರ್ 1 ರಂದು ಆಗಮಿಸುತ್ತಿದ್ದು, ಮೊದಲನೆಯ ದಿನ ತುಮಕೂರು ನಗರದಾದ್ಯಂತ ಸಂಚಾರ ಮಾಡಲಿರುವ ಪಂಚರತ್ನ ರಥಯಾತ್ರೆಗೆ ಜೆಡಿಎಸ್ ಭರ್ಜರಿ ತಯಾರಿ ಮಾಡಿಕೊಂಡಿದೆ.

ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಎನ್.ಗೋವಿಂದರಾಜು ನೇತೃತ್ವದಲ್ಲಿ ಮುಖಂಡರಾದ ನರಸೇಗೌಡರು,ಬೆಳ್ಳಿಲೋಕೇಶ್,ಟಿ.ಆರ್ ನಾಗರಾಜು ಹಾಗೂ ಎಲ್ಲಾ ಪಾಲಿಕೆ ಸದಸ್ಯರ ಸಹಕಾರದಿಂದ ಜಾಸ್ ಟೋಲ್ ಗೇಟ್ ಬಳಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಅದ್ದೂರಿಯಾಗಿ ಸ್ವಾಗತ ಕೋರಲು ಸಿದ್ದತೆ ಮಾಡಿಕೊಂಡಿದ್ದಾರೆ.

 ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ಕುಮಾರಸ್ವಾಮಿ ಶಿವೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ,ಶ್ರೀ ಶ್ರೀ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆಯಲಿದ್ದಾರೆ ಎಂದು ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ಎನ್.ಗೋವಿಂದರಾಜು ತಿಳಿಸಿದ್ದಾರೆ.

ಪಂಚರತ್ನ ರಥಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲಿದ್ದು,ಹಲವು ಕಡೆ ಸಭೆಗಳನ್ನು ಆಯೋಜನೆ ಮಾಡಲಾಗಿದೆ.ಜೆಡಿಎಸ್ ರಥಯಾತ್ರೆ ಸಂಚರಿಸುವ ರಸ್ತೆ ಉದ್ದಕ್ಕೂ ಜೆಡಿಎಸ್ ಬಾವುಟ,ಬ್ಯಾನರ್ ರಾರಾಜಿಸುತ್ತಿದ್ದು,ಎಲ್ಲಿ ನೋಡಿದರೂ ಕುಮಾರಸ್ವಾಮಿ ಅವರನ್ನು ಸ್ವಾಗತಿಸುವ ಬ್ಯಾನರ್ ಗಳು ಕಂಡುಬರುತ್ತಿದ್ದು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಎಲ್ಲಾ ಮುಖಂಡರ ಒಗ್ಗಟ್ಟಿನಿಂದ ಪಂಚರತ್ನ ರಥಯಾತ್ರೆ ಯಶಸ್ವಿಗೊಳಿಸಲು ಮುಂದಾಗಿದ್ದಾರೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!