ಗುಬ್ಬಿ: ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಇದೇ ತಿಂಗಳ 13 ರಂದು ಸಾರ್ವಜನಿಕರ ಕುಂದು ಕೊರತೆ ಆಲಿಸುವುದು ಹಾಗೂ ಅಹವಾಲು ಸ್ವೀಕಾರ ಸಭೆಯನ್ನು ಜಿಪಂ ಸಿಇಓ ಡಾ.ಕೆ. ವಿದ್ಯಾಕುಮಾರಿ ನಡೆಸಲಿದ್ದಾರೆ. ತಾಲ್ಲೂಕಿನ ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳನ್ನು ಈ ವೇದಿಕೆಯಲ್ಲಿ ಬಗೆಹರಿಸಿಕೊಳ್ಳಲು ತಾಪಂ ಇಓ ಪರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬೆಳಿಗ್ಗೆ 9 ಕ್ಕೆ ನಡೆಯುವ ಸಭೆಯಲ್ಲಿ ಜನರ ಅಹವಾಲು ಸ್ವೀಕರಿಸಿ ಕೂಡಲೇ ಪರಿಹಾರ ಸೂಚಿಸಲಿದ್ದಾರೆ. ಗ್ರಾಮ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಸಮಸ್ಯೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆ ಕಾರ್ಯಕ್ರಮದ ಅನುಷ್ಠಾನ ಬಗ್ಗೆ ಕೂಡಾ ವಿವರಿಸಲಿದ್ದಾರೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.