ನಾಳೆ ಚೇಳೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ


ಹೊಸಕೆರೆ: ಐತಿಹಾಸಿಕ ಸ್ಥಳವಾಗಿರುವ ಚೇಳೂರಿನಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ ಸಾ ಪ ತಾಲ್ಲೂಕು ಘಟಕದ ಅಧ್ಯಕ್ಷ ಎಚ್ ಸಿ ಯತೀಶ್ ತಿಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಇದೇ ತಿಂಗಳ 22ರಂದು ತಾಲ್ಲೂಕಿನ ಚೇಳೂರಿನಲ್ಲಿ 5ನೇ ತಾಲ್ಲೂಕುಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.
ಮರಳು ಬಸವೇಶ್ವರ ದೇವಸ್ಥಾನದಿಂದ ಪ್ರಾರಂಭವಾಗುವ ಸಮ್ಮೇಳನ ಅಧ್ಯಕ್ಷರ ಮೆರವಣಿಗೆಯು ವಿವಿಧ ಜಾನಪದ ಕಲಾತಂಡಗಳೊಂದಿಗೆ ಸ್ಥಬ್ಧ ಚಿತ್ರಗಳ ಮೆರವಣಿಗೆ, ಇತಿಹಾಸ ಪುರುಷರ ವೇಷ ಭೂಷಣಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಎಪಿಎಂಸಿ ಆವರಣದ ವೇದಿಕೆಯನ್ನು ತಲುಪುವುದು ಎಂದು ಹೇಳಿದರು.
ಈ ಸಮ್ಮೇಳನದಲ್ಲಿ ಮಕ್ಕಳ ಕವಿಗೋಷ್ಠಿಯನ್ನು ಏರ್ಪಡಿಸಿರುವುದು ವಿಶೇಷವಾಗಿದೆ. ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯ.
ಸಮ್ಮೇಳನದ ಅಧ್ಯಕ್ಷರನ್ನಾಗಿ ಜನಪದ ವಿದ್ವಾಂಸ ಚಿಕ್ಕಣ್ಣ ಎಣ್ಣೆಕಟ್ಟೆ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ತಾಲ್ಲೂಕು ಘಟಕದ ಕಾರ್ಯದರ್ಶಿ ಎಂ ಬಿ ಕುಮಾರಸ್ವಾಮಿ ಮಾತನಾಡಿ ಸಮ್ಮೇಳನದಲ್ಲಿ ಭಾಗವಹಿಸುವ ಶೇ50 ರಷ್ಟು ಸರ್ಕಾರಿ ನೌಕರರಿಗೆ ಅನ್ಯಕಾರ್ಯ ನಿಮಿತ್ತ ಪ್ರಮಾಣ ನೀಡಲಾಗುವುದು.ಯಾವುದೇ ರೀತಿಯ ಪ್ರತಿನಿಧಿ ಶುಲ್ಕವನ್ನು ವಸೂಲಿ ಮಾಡುತ್ತಿಲ್ಲ ಎಂದು ತಿಳಿಸಿದರು.

ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಂಜಿನಪ್ಪ ಮಾತನಾಡಿ ಸಾಹಿತ್ಯ ಸಮ್ಮೇಳನ ಈ ನಾಡಿನ ಭಾಷೆ ,ಸಂಸ್ಕೃತಿ, ಸಾಹಿತ್ಯದ ಸಂಕೇತವಾಗಿದ್ದು, ನಮ್ಮೆಲ್ಲರ ಗೌರವದ ಪ್ರತೀಕವಾಗಿದೆ. ಎಲ್ಲರೂ ಒಗ್ಗೂಡಿ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದು ತಿಳಿಸಿದರು.

ನಿಟ್ಟೂರು ಹೋಬಳಿ ಘಟಕದ ಅಧ್ಯಕ್ಷ ಜಯಪ್ರಕಾಶ್ ಮಾತನಾಡಿ ತಾಲ್ಲೂಕಿನಾದ್ಯಂತ ವ್ಯಾಪಕ ಪ್ರಚಾರ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಹೋಬಳಿಗಳಲ್ಲಿಯೂ ಸಮ್ಮೇಳನಗಳನ್ನು ಹಮ್ಮಿಕೊಂಡು ಸಾಹಿತ್ಯದ ತೇರನ್ನು ಎಳೆಯೋಣ ಎಂದರು.

ಈ ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಘಟಕದ ಕಾರ್ಯದರ್ಶಿ ಜಯಣ್ಣ,
ಕೋಶಾಧ್ಯಕ್ಷ ಸುಬ್ರಮಣ್ಯ, ಪದಾಧಿಕಾರಿಗಳಾದ ಜಗದೀಶ್, ರವೀಶ್, ಶಿವಣ್ಣ ಹಾಗೂ ಇತರರು ಭಾಗವಹಿಸಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!