ಮಧುಗಿರಿ: ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಹೆಜ್ಜೇನು ದಾಳಿ

ಮಧುಗಿರಿ: ಕಾಂಗ್ರೆಸ್ ಕಾರ್ಯಕ್ರಮಕ್ಕೆ ಸೇರಿದ್ದ ಹಲವು ಕಾರ್ಯಕರ್ತರಿಗೆ ಹೆಜ್ಜೇನು ನೋಣಗಳು ಕಚ್ಚಿ ಆಸ್ಪತ್ರೆ ಸೇರಿರುವ ಘಟನೆ ನಡೆದಿದೆ.

ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಹೊಸಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಕಾಂಗ್ರೆಸ್ನ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಗೆ ಮಾಜಿ ಶಾಸಕ ಕೆ.ಎನ್. ರಾಜಣ್ಣ ಆಗಮಿಸಬೇಕಾಗಿತ್ತು. ಅಷ್ಟರಲ್ಲಿ ಪಕ್ಕದ ಮರಗಳಲ್ಲಿ ದ್ದ ಹೆಜ್ಜೇನು ಗೂಡಿಗೆ ಯಾರೋ ಕಿಡಿಗೇಡಿಗಳು ಕಲ್ಲೆಸೆದಿದ್ದಾರೆ.
ಈ ವೇಳೆ ಸುಮಾರು 20ರಿಂದ 30 ಜನರಿಗೆ ಹೆಜ್ಜೇನು ನೋಣಗಳು ಕಚ್ಚಿವೆ.
ಕೆಲವರು ಹೊಸಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದು. ಹೆಚ್ಚು ಅಸ್ವಸ್ಥಗೊಂಡಿದ್ದ ಮೂವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಕಳುಹಿಸಲಾಗಿದೆ.
ಮೂವರಿಗೆ ಐಸಿಯುಗೆ ದಾಖಲು: ಚಿಕ್ಕ ಯಲ್ಕೂರು ಗ್ರಾಮದ ಯುವಕ ಅಶೋಕ್ ಮತ್ತು ತಿಪ್ಪಗೊಂಡನಹಳ್ಳಿ ಗ್ರಾಮದ ರಾಮಣ್ಣ ಪಟ್ಟಣದ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಧ್ಯಮದವರು ಆಸ್ಪತ್ರೆಗೆ ದಾಖಲು: ‌ಹೇಜ್ಜೇನು ನೋಣಗಳಿಂದ ಕಚ್ಚಿಸಿಕೊಂಡು ತೀವ್ರ ಅಸ್ವಸ್ಥ ಗೊಂಡಿದ್ದ ಮಧುಗಿರಿ ನ್ಯೂಸ್ ನ ಶಿವಕುಮಾರ್ ಮಧುಗಿರಿ ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಜಾಮನ ವರದಿಗಾರ ಎಂ.ಎಸ್. ರಘುನಾಥ್ ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಯನ್ನು ನೀಡಲಾಗುತ್ತಿದೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!