ನಾಳೆ ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ

ತುಮಕೂರು: ನಗರದ ಅಮಾನಿಕೆರೆ ಗಾಜಿನಮನೆಯಲ್ಲಿ ಜ.24ರಂದು ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.

ನಗರದ ಗಾಜಿನಮನೆ ಆವರಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಎಐಸಿಸಿ ಮತ್ತು ಕೆಪಿಸಿಸಿ ನಾಯಕರು ಭಾಗವಹಿಸಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ, ಮಾಜಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್, ಬಿ.ಕೆ.ಹರಿಪ್ರಸಾದ್, ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳ ಆಕಾಂಕ್ಷಿ ಅಭ್ಯರ್ಥಿಗಳು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲು ಬೇಕಾದ ಅಗತ್ಯ ವಾತಾವರಣ, ಪಕ್ಷ ಸಂಘಟನೆ, ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಕೆಪಿಸಿಸಿ ಉಪಾಧ್ಯಕ್ಷ ಶಫಿವುಲ್ಲಾ ಮಾತನಾಡಿ, 12 ಜಿಲ್ಲೆಗಳಲ್ಲಿ ಕಾಂಗ್ರೆಸ್ ಯಾತ್ರೆ ಪೂರ್ಣ ಗೊಂಡಿದ್ದು, ಜನವಿರೋಧಿ ಸರ್ಕಾರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಮಾರ್ಚ್17ರ ವೇಳೆಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನೋಟಿಫಿಕೇಷನ್ ಆಗುವ ಸಾಧ್ಯತೆ ಇದ್ದು, ಪಕ್ಷದ ಕಾರ್ಯಕರ್ತರು ಸಾಕಷ್ಟು ಶ್ರಮಿಸಿ, ನಮ್ಮ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕೆಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖ ರಗೌಡ, ಮಾಜಿ ಅಧ್ಯಕ್ಷ ಎಸ್. ಷಫಿ ಅಹಮದ್, ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಮಾಜಿ ಶಾಸಕರಾದ ಡಾ.ಎಸ್.ರಫೀಕ್ ಅಹಮದ್, ಆರ್.ನಾರಾಯಣ್, ಮುಖಂಡ ರಾದ ರೆಡ್ಡಿ ಚಿನ್ನಯಲ್ಲಪ್ಪ, ವೆಂಕಟೇಶ್, ಫರನಾಬೇಗಂ, ಧನಂಜಯ್, ಇಕ್ಬಾಲ್ ಅಹಮದ್, ಅತೀಕ್ ಅಹಮದ್, ಮುರಳೀ ಧರ ಹಾಲಪ್ಪ, ಮರಿಚನ್ನಮ್ಮ ಮುಂತಾದವರು ಹಾಜರಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!