ಶಾಸಕ ಡಿ.ಸಿ ಗೌರಿಶಂಕರ್ ಜನತಾ ದರ್ಶನಕ್ಕೆ ಹರಿದುಬಂದ ಜನಸಾಗರ: ಸ್ಥಳದಲ್ಲೇ ಪರಿಹಾರ

ತುಮಕೂರು : ಗ್ರಾಮಾಂತರ ಕ್ಷೇತ್ರದ ಸಾವಿರಾರು ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಿ ಸೂಕ್ತ ಪರಿಹಾರವನ್ನು ಶಾಸಕ ಡಿ.ಸಿ ಗೌರಿಶಂಕರ್ ರವರು ಒದಗಿಸಿದರು.

ಶಾಸಕ ಡಿ.ಸಿ ಗೌರಿಶಂಕರ್ ಅವರು ಶನಿವಾರ ಸಂಜೆ ತಮ್ಮ ಬಳ್ಳಗೆರೆಯ ನಿವಾಸದಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಿ ಸುಮಾರು 5000ಕ್ಕೂ ಹೆಚ್ಚು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಬಂದಂತಹ ಎಲ್ಲಾ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸೂಕ್ತ ಪರಿಹಾರ ಒದಗಿಸಿಕೊಟ್ಟರು.

ಈ ಸಂದರ್ಭದಲ್ಲಿ ಮದುವೆ ಕಾರ್ಯಗಳಿಗೆ, ಆರೋಗ್ಯ ಸಮಸ್ಯೆ ಉಳ್ಳವರಿಗೆ, ವಿದ್ಯಾಭ್ಯಾಸಕ್ಕೆ, ಮನೆ ಇಲ್ಲದವರಿಗೆ ಮನೆ ಕಟ್ಟಿಕೊಳ್ಳಲು ಸಿಮೆಂಟ್, ಶಿಟ್, ಸೇರಿದಂತೆ ಇನ್ನು ಹಲವಾರು ಕಾರ್ಯಗಳಿಗೆ ಬಡವರಿಗೆ ಸುಮಾರು 5,00,000 ಲಕ್ಷಕ್ಕೂ ಹೆಚ್ಚಿನ ಧನ ಸಹಾಯ ಮಾಡಿದ್ದಾರೆ.ಕ್ಷೇತ್ರದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 550ಕ್ಕೂ ಹೆಚ್ಚು ಅಂಕ ಪಡೆದಂತಹ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ 5000 ರೂಗಳಂತೆ ತಮ್ಮ ಸ್ವಂತ ಹಣವನ್ನು ಪ್ರತಿಭಾ ಪುರಸ್ಕಾರವಾಗಿ ಒಟ್ಟು ಸುಮಾರು 5,00,000 ಲಕ್ಷ ರೂಗಳನ್ನು ನೀಡಿದ್ದು ವಿಶೇಷವಾಗಿತ್ತು.

ಇದೇ ಸಂದರ್ಭದಲ್ಲಿ ಶಾಸಕರ ಅಭಿವೃದ್ಧಿ ಕಾರ್ಯಕ್ಕೆ ಹಾಗೂ ನಾಯಕತ್ವಕ್ಕೆ ಮೆಚ್ಚಿ ನೂರಾರು ಬಿಜೆಪಿ ಪಕ್ಷದ ಮುಖಂಡರುಗಳು,ಕಾರ್ಯಕರ್ತರುಗಳು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!