ಎಂ ಎನ್ ಕೋಟೆ : ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕಲಿಕಾ ಹಬ್ಬ ಸಹಕಾರಿಯಾಗಲಿದೆ ಎಂದು ತ್ಯಾಗಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭೈರಮ್ಮ ಈಶ್ವರಯ್ಯ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ತ್ಯಾಗಟೂರು ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಲಿಕಾ ಹಬ್ಬವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಕಲಿಕೆಯಿಂದ ಹಿಂದೆ ಉಳಿಯಬಾರದು ಎಂಬ ನಿಟ್ಟಿನಲ್ಲಿ ಸರಕಾರ ಕಲಿಕಾ ಹಬ್ಬವನ್ನು ಮಾಡಲಾಗುತ್ತಿದೆ. ಕೋವಿಡ್ ಸಂಧರ್ಭದಲ್ಲಿ ಶಾಲೆಗಳನ್ನು ಎರಡು ವರ್ಷಗಳ ಕಾಲ ಮುಚ್ಚಿದ್ದು ಮಕ್ಕಳು ಕಲಿಕೆಯಿಂದ ಹಿಂದೆ ಬೀಳಬಾರದು ಆದ್ದರಿಂದ ಪ್ರತಿ ಕ್ಪಸ್ವರ್ ಮಟ್ಟದಲ್ಲಿ ಕಲಿಕಾ ಹಬ್ಬ ಸರ್ಕಾರ ಮಾಡುತ್ತಿದ್ದು ಮಕ್ಕಳು ಕಲಿಕಾ ಹಬ್ಬವನ್ನು ಸದುಪಯೊಗಪಡಿಸಿಕೊಂಡು ಶೈಕ್ಷಣಿಕ ಮಟ್ಟದಲ್ಲಿ ಕಲಿಕೆಯಲ್ಲಿ ಶಾಲಾ ಮಕ್ಕಳು ಮುಂದೆ ಬರಬೇಕು ಎಂದರು.
ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು.ಗ್ರಾಮೀಣ ಭಾಗದ ಮಕ್ಕಳನ್ನು ವಿದ್ಯಾವಂತರಾಗಿ ಮಾಡುವ ಜವಬ್ದಾರಿ ಶಿಕ್ಷಕರ ಮೇಲೆ ಇದೆ ಜೂತೆಗೆ ಪಾಲಕರು ಮಕ್ಕಳ ಬಗ್ಗೆ ಕಾಳಜಿವಹಿಸಿ ಸಮಾಜದಲ್ಲಿ ಉತ್ತಮ ಪ್ರಜೆಗಳಾಗಬೇಕು ಎಂದು ತಿಳಿಸಿದರು.
ಕಲಿಕೆ ಹಬ್ಬದಲ್ಲಿ ಮಕ್ಕಳು ವಿವಿಧ ವೇಷ ಭೂಷಣಗಳನ್ನು ಹಾಕಿಕೊಂಡು ಗಮನ ಸೆಳೆದರು.13 ಶಾಲೆಯ ಮಕ್ಕಳು ಕಲಿಕಾ ಹಬ್ಬದಲ್ಲಿ ಭಾಗವಹಿಸಿದ್ದರು.
ಇದೇ ಸಂಧರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರಸ್ವಾಮಿ , ಭವ್ಯ ಪರಮೇಶ್ , ಪಿಡಿಓ ವನಾಜಾಕ್ಷಿ , ಎಸ್ ಡಿಎಂಸಿ ಅಧ್ಯಕ್ಷರಾದ ಕೆಂಪಣ್ಣ , ರವಿಕುಮಾರು , ಶಾಲ ಶಿಕ್ಷಕರು ಎಸ್ ಡಿಎಂಸಿ ಸದಸ್ಯರು ಶಾಲಾ ಮಕ್ಕಳು ಭಾಗವಹಿಸಿದ್ದರು.