ಹೊಸಕೆರೆ: ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಅಳಿಲಘಟ್ಟ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಹರದಗೆರೆ ಗ್ರಾಮದ ಶಿವಣ್ಣ 11 ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಚುನಾಯಿತರಾದರು. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ತಹಶೀಲ್ದಾರ್ ಬಿ.ಆರತಿ ಅವರು ನಡೆಸಿಕೊಟ್ಟರು.
ಈ ಹಿಂದೆ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಭಾಕರ್ ರಾಜೀನಾಮೆ ನೀಡಿ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು. ಶಿವಣ್ಣ ಹಾಗೂ ಶಿವರಾಜು ಇಬ್ಬರು ನಾಮಪತ್ರ ಸಲ್ಲಿಸಿದ್ದರು. ಒಟ್ಟು 20 ಸದಸ್ಯರ ಮತದಾನ ಪ್ರಕ್ರಿಯೆ ನಡೆದು ಶಿವಣ್ಣ 11ಮತಗಳನ್ನು ಪಡೆದು ಗೆಲುವು ಸಾಧಿಸಿದರು.
ಪ್ರತಿಸ್ಪರ್ಧಿ ಶಿವರಾಜು 9 ಮತಗಳನ್ನು ಪಡೆದು ಪರಾಜಿತಗೊಂಡರು. ನಂತರ ಸುದ್ದಿಗಾರರ ಜೊತೆ ನೂತನ ಉಪಾಧ್ಯಕ್ಷ ಶಿವಣ್ಣ ಮಾತನಾಡಿ ಸದಸ್ಯರು ನನ್ನ ಮೇಲೆ ವಿಶ್ವಾಸವಿಟ್ಟು ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಅಭಿವೃದ್ದಿ ಕೆಲಸ ಮಾಡುತ್ತೇನೆ. ಎಲ್ಲರ ವಿಶ್ವಾಸ ಗಳಿಸಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದನಾಗಿರುತ್ತೇನೆ. ಹಳ್ಳಿಗಳಲ್ಲಿ ಯಾವುದೇ ಸಮಸ್ಯೆ ಬರದಂತೆ ನೊಡಿಕೊಳುತ್ತೇನೆ ಈ ನಿಟ್ಟಿನಲ್ಲಿ ಮಾದರಿ ಗ್ರಾಮ ಪಂಚಾಯಿತಿಯಾಗಿ ಗುರುತಿಸಿ ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಹಲವು ಕೆಲಸಗಳನ್ನು ಮಾಡುವುದಾಗಿ ಭರವಸೆ ನೀಡಿದರು.
ಇದೇ ಸಂಧರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ಮೋರ್ಚಾ ಮಾಜಿ ಅಧ್ಯಕ್ಷ ಜಿ.ಎನ್.ಬೆಟ್ಟಸ್ವಾಮಿ ನೂತನ ಉಪಾಧ್ಯಕ್ಷರನ್ನು ಅಭಿನಂಧಿಸಿದರು.
ನಂತರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಗ್ರಾಮ ಪಂಚಾಯಿತಿ ಸಧ್ಯರಾದ ಯಮುನ ರಮೇಶ್ , ಪ್ರೇಮ್ ಕುಮಾರು , ಯೋಗೀಶ್ವರ್ , ತನುಜ ಶಶಿಧರ್ , ಛಾಯಾ ಲೋಕೇಶ್ , ನೇತ್ರಾವತಿ ಪಾಲನೇತ್ರಯ್ಯ , ಲಕ್ಷ್ಮೀದೇವಮ್ಮ , ಅನ್ನಪೂರ್ಣಮ್ಮ , ವೇಣುಗೋಪಾಲ್ , ಯೋಗೀಶ್ ಮುಖಂಡರಾದ ರಮೇಶ್ , ಕೆಂಪಣ್ಣ , ಚಿಕ್ಕಕದರಯ್ಯ , ಲೋಕೇಶ್ , ದಾಸಣ್ಣ. ಉಪತಹಸೀಲ್ದಾರ್ ವೆಂಕಟರಂಗನ್ ಕಂದಾಯ ತನಿಖಾಧಿಕಾರಿ ಗುರುಪ್ರಸಾದ್ ಪಿಡಿಓ ವಸಂತ್ , ಕಾರ್ಯದರ್ಶಿ ನರಸಿಂಹಮೂರ್ತಿ ಭಾಗವಹಿಸಿದ್ದರು.