ಪೆದ್ದನಹಳ್ಳಿ ಗ್ರಾಪಂ ಅಧ್ಯಕ್ಷರಾಗಿ ಎಂ.ಜಿ.ಬಸವರಾಜು ಅವಿರೋಧ ಆಯ್ಕೆ.

ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿ ಪೆದ್ದನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೆ.ಮತ್ತಿಘಟ್ಟದ ಎಂ.ಜಿ.ಬಸವರಾಜು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದರು.

ಪಂಚಾಯಿತಿ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ತಹಶೀಲ್ದಾರ್ ಬಿ.ಆರತಿ ನಡೆಸಿಕೊಟ್ಟರು. ಸಾಮಾನ್ಯ ಮೀಸಲಿನ ಅಧ್ಯಕ್ಷ ಸ್ಥಾನಕ್ಕೆ ಕಳೆದ ಬಾರಿ ಅಧ್ಯಕ್ಷರಾಗಿದ್ದ ನಾಗರಾಜು ರಾಜೀನಾಮೆ ಸಲ್ಲಿಸಿ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೆ.ಮತ್ತಿಘಟ್ಟ ಸದಸ್ಯ ಎಂ.ಜಿ.ಬಸವರಾಜು ಏಕೈಕ ನಾಮಪತ್ರ ಸಲ್ಲಿಸಿದ್ದ ಹಿನ್ನಲೆ ಅವಿರೋಧ ಆಯ್ಕೆ ಘೋಷಣೆ ಮಾಡಲಾಯಿತು.

ನಂತರ ಸುದ್ದಿಗಾರರ ಜೊತೆ ನೂತನ ಅಧ್ಯಕ್ಷ ಎಂ.ಜಿ.ಬಸವರಾಜು ಮಾತನಾಡಿ, ಎಲ್ಲಾ ಸದಸ್ಯರು ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಶಕ್ಷರಾಗಿ ಆಯ್ಕೆ ಮಾಡಿದ್ದಾರೆ. ಅವರ ನಂಬಿಕೆಗೆ ಚ್ಯುತಿ ಬಾರದಂತೆ ಅಭಿವೃದ್ದಿ ಕೆಲಸ ಮಾಡುತ್ತೇನೆ. ಎಲ್ಲರ ವಿಶ್ವಾಸ ಗಳಿಸಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ದನಾಗಿರುತ್ತೇನೆ. ರಸ್ತೆ, ಚರಂಡಿ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಹಲವು ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಅಧ್ಯಕ್ಷರಾಗಿ ಆಯ್ಕೆ ಮಾಡಲು ಶಾಸಕ ಎಸ್.ಆರ್.ಶ್ರೀನಿವಾಸ್ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜ್ ಅವರ ಸಹಕಾರ ಸಾಕಷ್ಟಿದೆ. ಈ ಬಾರಿ ಚುನಾವಣೆಯಲ್ಲಿ ಬೆಮೆಲ್ ಕಾಂತರಾಜ್ ಅವರ ಪರ ನಿಂತು ಗೆಲುವು ಸಾಧಿಸಲು ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶ್ರಮ ವಹಿಸುತ್ತೇನೆ ಎಂದ ಅವರು ಇ ಖಾತೆ ಸೇರಿದಂತೆ ಹಲವು ದಾಖಲೆ ಮಾಡಿಕೊಡುವಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಎಚ್ಚರವಹಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಗ್ರಾಮೀಣ ಜನರ ಕಷ್ಟಕ್ಕೆ ಸ್ಪಂದಿಸಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ನಂತರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಗ್ರಾಪಂ ಉಪಾಧ್ಯಕ್ಷೆ ಚಂದ್ರಮ್ಮ, ಮುಖಂಡರಾದ ಹಾರನಹಳ್ಳಿ ಪ್ರಭಣ್ಣ, ವರಹಸಂದ್ರ ಕೃಷ್ಣಪ್ಪ, ಕಾಳೆನಹಳ್ಳಿ ಲೋಕೇಶ್, ಶಿವಕುಮಾರಸ್ವಾಮಿ, ಹೇಮಂತ್ ಕುಮಾರ್, ಕಲ್ಲೂರು ಸುರೇಶ್, ಮಹಮದ್ ಯೂಸಫ್, ಮೂರ್ತಾಚಾರ್, ತ್ರಿನೇಶ್, ಸಿದ್ದೇಶ್, ಪಿಡಿಓ ಶ್ಯಾಮಲದೇವಿ ಇತರರು ಇದ್ದರು.

ವರದಿ: ಹರಿಪ್ರಿಯ ರಮೇಶ್ ಗೌಡ, ಗುಬ್ಬಿ.

You May Also Like

error: Content is protected !!