ಪಾವಗಡ .ತಾಲೂಕಿನ ಬೂದಿ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಹತ್ವಕಾಂಕ್ಷಿ ಯೋಜನೆಯ ಪ್ರಣಾಳಿಕೆಯ ಬಗ್ಗೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿ ಚ್‌ವಿ ವೆಂಕಟೇಶ್ ಮಾತನಾಡಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಯ ಯಜಮಾನಿಗೆ ಮಾಸಿಕ ಎರಡು ಸಾವಿರ ನೀಡುವ ಗೃಹಲಕ್ಷ್ಮಿ, ಪ್ರತಿ ಮನೆಗೆ ಮಾಸಿಕ 200ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಮತ್ತು ರಾಜ್ಯದ ಪ್ರತಿ ಕುಟುಂಬ ಸದಸ್ಯನಿಗೆ ತಿಂಗಳಿಗೆ 10 ಕೆ ಜಿ ಉಚಿತ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆಗಳ * ಜಾರಿಗೆ ತರಲಾಗುವುದು ಎಂದು ತಿಳಿಸಿದರು.
ಇಂದು ಪಾವಗಡ ತಾಲ್ಲೂಕಿನ ಬೂದಿಬೆಟ್ಟ ಗ್ರಾ ಪಂ ವ್ಯಾಪ್ತಿಯ ಎರ್ರಮ್ಮನಹಳ್ಳಿ ಗ್ರಾಮಕ್ಕೆ ಹೆಚ್ ವಿ ವೆಂಕಟೇಶ್ ಅವರು ತೆರಳಿ ಆ ಗ್ರಾಮದಲ್ಲಿನ ಮಹಿಳಾ ಕಾರ್ಯಕರ್ತೆಯರಿಗೆ ಕಾರ್ಡ್ ಗಳನ್ನು ವಿತರಿಸಿ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು…
ಈ ವೇಳೆ ಆ ಗ್ರಾಮದ ಅನೇಕ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದು ಕಾಂಗ್ರೆಸ್ ಪಕ್ಷದ ಯೋಜನೆಗಳ ಬಗ್ಗೆ ತಿಳಿದುಕೊಂಡರು.
ಇದೇ ಸಂದರ್ಭದಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಜರಿದ್ದರು