ಚುನಾವಣಾ ಪ್ರಚಾರಕ್ಕೆ ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಚಾಲನೆ

ತುಮಕೂರು : ನಗರದ ಬಿ.ಹೆಚ್ ರಸ್ತೆಯ ಶ್ರೀ ಆಂಜನೇಯ ಸ್ವಾಮಿಯ ಸನ್ನಿಧಿಯಲ್ಲಿ ಸೋಮವಾರ ಪೂಜೆ ಸಲ್ಲಿಸಿದ ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು.

ನಗರದ 27ನೇ ವಾರ್ಡಿನ ಗಂಗೋತ್ರಿ ರಸ್ತೆ ಎಸ್.ಐ.ಟಿ ಮುಖ್ಯರಸ್ರೆ ಸೇರಿದಂತೆ ಕೃಷ್ಣನಗರ ಬಿ.ಹೆಚ್ ರಸ್ತೆ,ಡೋಬಿ ಗಾರ್ಡ್,ಸೋಮೇಶ್ವರ ಬಡಾವಣೆಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಭಾಗಿಯಾದ್ದರು.

ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿ ಜೆಡಿಎಸ್ ಅಭ್ಯರ್ಥಿ ಎನ್.ಗೋವಿಂದರಾಜು ಮಾತನಾಡಿ ತುಮಕೂರು ನಗರದ ಎಲ್ಲಾ ವಾರ್ಡ್ ಗಳಲ್ಲಿ ಇಂದಿನಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪಂಚರತ್ನ ಯೋಜನೆಗಳ ಬಗ್ಗೆ ಈಗಾಗಲೇ ಮನೆ ಮನೆಗೆ ತಲುಪಿಸಿದ್ದು,ಮತ್ತೊಮ್ಮೆ ಜನರ ಬಳಿಗೆ ಹೋಗಿ ಮತಯಾಚನೆ ಮಾಡುತ್ತೇನೆ.ನಗರದ ಜನರು ಈ ಬಾರಿ ಜೆಡಿಎಸ್ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ.ಎರಡು ರಾಷ್ಟ್ರೀಯ ಪಕ್ಷಗಳಿಗೂ ನಗರದ ಜನರು ಅಧಿಕಾರ ಕೊಟ್ಟಿ ನೋಡಿದ್ದಾರೆ. ನನಗೂ ಒಂದು ಅವಕಾಶ ಮಾಡಿ ಕೊಟ್ಟರೆ ಖಂಡಿತ ನಗರದ ಅಭಿವೃದ್ಧಿಗೆ ಶ್ರಮಿಸುವೆ ಎಂದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರು ಧರಣೇಂದ್ರಕುಮಾರ್,ಶ್ರೀನಿವಾಸ್, ನಗರಾಧ್ಯಕ್ಷ ವಿಜಿ ಗೌಡ,ರೈತ ಮುಖಂಡ ರಂಗನಾಥ್, ಮಹಿಳಾ ಘಟಕದ ನಗರಾಧ್ಯಕ್ಷೆ ಲೀಲಾವತಿ, ವಕ್ತಾರ ಮಧುಸೂದನ್, 27ನೇ ವಾರ್ಡಿನ ಮಾಜಿ ಪಾಲಿಕೆ ಸದಸ್ಯರು ನರಸಿಂಹರಾಜು,ಮಾಜಿ ನಗರ ಸಭೆ ಸದಸ್ಯರು ಪ್ರಸಾದ್,ಜಯರಾಮ್,ಗಂಗಣ್ಣ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!