ಗುಬ್ಬಿ: ಹಲವು ವರ್ಷದಿಂದ ಸರಿಯಾದ ರಸ್ತೆ, ಚರಂಡಿ, ನೀರು ಕಾಣದ ಗುಬ್ಬಿ ಪಟ್ಟಣದ ನಾಗರೀಕರು ಜೆಡಿಎಸ್ ಪಕ್ಷಕ್ಕೆ ಒಲವು ತೋರಿದ್ದಾರೆ. ಆದರೆ ಅಭಿವೃದ್ದಿ ವಿಚಾರದಲ್ಲಿ ಬೇಸರ ವ್ಯಕ್ತಪಡಿಸಿ ಕೆಲಸ ಮಾಡುವ ವ್ಯಕ್ತಿಗೆ ಇಚ್ಛೆ ಪಡುತ್ತಿದ್ದಾರೆ ಎಂದು ಜಿಪಂ ಮಾಜಿ ಸದಸ್ಯೆ ಗಾಯತ್ರಿದೇವಿ ನಾಗರಾಜು ತಿಳಿಸಿದರು.
ಪಟ್ಟಣದ 1,2,3 ಹಾಗೂ 4 ನೇ ವಾರ್ಡ್ ಗಳಲ್ಲಿ ಜೆಡಿಎಸ್ ಪರ ಮತಯಾಚನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೂಲಭೂತ ಸೌಕರ್ಯಗಳನ್ನು ಒದಗಿಸದ ಜನ ಪ್ರತಿನಿಧಿಗಳ ಬಗ್ಗೆ ಅಸಮಾಧಾನವಿದೆ. ಆದರೆ ಪಕ್ಷಕ್ಕೆ ಬೆಂಬಲ ನೀಡುತ್ತೇವೆ ಎಂದು ಜೆಡಿಎಸ್ ಪಕ್ಷದ ಮೇಲಿನ ಅಭಿಮಾನ ತೋರುತ್ತಿದ್ದಾರೆ. ಈ ಹಿನ್ನಲೆ ನಾಗರಾಜು ಕೆಲಸ ಮಾಡುವ ವ್ಯಕ್ತಿ. ಅವರಿಗೆ ನಮ್ಮ ಬೆಂಬಲ ಇದೆ ಎಂದರು.

ಜೆಡಿಎಸ್ ಭದ್ರಕೋಟೆ ಎನಿಸಿದ ಗುಬ್ಬಿ ಕ್ಷೇತ್ರದಲ್ಲಿ ಅಭಿವೃದ್ದಿ ವಿಚಾರದಲ್ಲಿ ಮಾತ್ರ ಸಾಕಷ್ಟು ಬೇಸರ ವ್ಯಕ್ತಪಡಿಸಿದ್ದಾರೆ. ಈ ಮಧ್ಯೆ ಜೆಡಿಎಸ್ ಪ್ರಾದೇಶಿಕ ಪಕ್ಷದ ಆಡಳಿತ ಬಯಸಿದ್ದಾರೆ. ಇವೆಲ್ಲವನ್ನೂ ಅರಿತು ನಾನು ಜಿಲ್ಲಾ ಪಂಚಾಯಿತಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಸಾಕ್ಷಿಯಲ್ಲಿ ಮತ ಕೇಳುತ್ತಿದ್ದೇವೆ.
ಬದಲಾವಣೆಯ ಮನಸ್ಥಿತಿ ಇರುವ ಜನರು ಉತ್ತಮ ವ್ಯಕ್ತಿ ಬಯಸಿದ್ದಾರೆ. ರಾಷ್ಟ್ರೀಯ ಪಕ್ಷಗಳ ಬಗ್ಗೆ ಅಸಡ್ಡೆ ಕೂಡಾ ಕಾಣುತ್ತಿದೆ. ಜನರ ಸ್ಪಂದನೆ ಗಮನಿಸಿದರೆ ಜೆಡಿಎಸ್ ಪಕ್ಷಕ್ಕೆ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಡಿ.ರಘು, ಗಂಗಣ್ಣ, ಗೋವಿಂದರಾಜು, ಗಿರೀಶ್ ಇತರರು ಇದ್ದರು.