ಮಧುಗಿರಿ: ಪ್ರೆಟ್ರೋಲ್ ಬಂಕ್ ಲ್ಲಿ ತಾಯಿ ಮಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಒಂದು ಸಾವು

ಮಧುಗಿರಿ : ಸಗಟು ದರದಲ್ಲಿ ಪ್ರೆಟ್ರೋಲ್ ಖರೀದಿಸಿ ತಮ್ಮ ಚಿಲ್ಲೆರೆ ಅಂಗಡಿಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಬಂಕ್ ಗೆ ಬಂದಿದ್ದ ತಾಯಿ ಮಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಬ್ಬರು ಮೃತಪಟ್ಟು ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತಾಲೂಕಿನ ದೊಡ್ಡೇರಿ ಹೋಬಳಿಯ ಬಡವನಹಳ್ಳಿಯ ಗ್ರಾಮದಲ್ಲಿರುವ ಚೆಕ್ ಪೋಸ್ಟ್ ಬಳಿ ಇರುವ ಪೆಟ್ರೋಲ್ ಬಂಕ್ ಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಶಿರಾ ತಾಲೂಕಿನ ಜವನಹಳ್ಳಿಯ ವಾಸಿಗಳಾದ ಭವ್ಯ (18) ಹಾಗೂ ರತ್ನಮ್ಮ(46) ರವರುಗಳು ಬುಧುವಾರ ಸಂಜೆ ಸುಮಾರು 4 ರ ಸಮಯದಲ್ಲಿ ಪೆಟ್ರೋಲ್ ಬ್ಯಾಂಕ್ ಬಳಿಗೆ ಬಂದು ಪೆಟ್ರೋಲ್ ನನ್ನು ಕ್ಯಾನ್ ತುಂಬಿಸುವಾಗ ದ್ವಿಚಕ್ರ ವಾಹನದ ಮೇಲೆ ಕುಳಿತು ಕೊಂಡಿದ್ದ ಭವ್ಯ ಹಾಗೂ ತಾಯಿ ರತ್ನಮ್ಮ ಎನ್ನುವವರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಇವರುಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಭವ್ಯ ಗುರುವಾರ ರಾತ್ರಿ ಮೃತಪಟ್ಟಿದ್ದಾರೆ. ತಾಯಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಶುಕ್ರವಾರ ಶಿರಾ ತಾಲೂಕಿನ ಜವನ ಹಳ್ಳಿಯಲ್ಲಿನ ಸ್ವಂತ ಜಮೀನಿನಲ್ಲಿ ಭವ್ಯವರ ಅಂತ್ಯಕ್ರಿಯೆ ನಡೆಸಲಾಗಿದೆ.ಬಡವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!