ಸಹಕಾರಿ ರತ್ನ ಕೆ.ಎನ್. ರಾಜಣ್ಣ ಅವರಿಗೆ ಸಚಿವ ಸ್ಥಾನ ನೀಡಲು ಪಾಳೇಗಾರ ಲೋಕೇಶ್ ಒತ್ತಾಯ

ಪಾವಗಡ. ತುಮಕೂರು ಜಿಲ್ಲೆಯ ಶೋಷಿತ ಸಮುದಾಯಗಳ ಧ್ವನಿ ಸಹಕಾರಿ ರತ್ನ ಸರ್ವ ಜನಾಂಗ ಪ್ರೀತಿಸುವ ನಾಯಕ ತುಮಕೂರು ಜಿಲ್ಲೆಯಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಜಯಶೀಲರಾಗಿರುವ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರು ತುಮಕೂರು ಜಿಲ್ಲಾ ಡಿಸಿಸಿ ಬ್ಯಾಂಕ್ ಅಧ್ಯಕ್ಷರು ಹಾಗೂ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀಮಾನ್ ಕೆ ಎನ್ ರಾಜಣ್ಣ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯವರಿಗೂ ಹಾಗೂ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷರಾದ ದೇವಲಕೆರೆ ಪಾಳೇಗಾರ್ ಲೋಕೇಶ್ ಮನವಿ ಮಾಡಿದ್ದಾರೆ

ಕೆ .ಎನ್ .ರಾಜಣ್ಣನವರು 3 ಸಾರಿ ಶಾಸಕರಾಗಿ ಆಯ್ಕೆಯಾಗಿದ್ದು. ಸಹಕಾರ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದು ತುಮಕೂರು ಜಿಲ್ಲೆಯ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷರಾಗಿ ಜಿಲ್ಲೆಯ ಬಡವರ ರೈತರ ಶ್ರಮಿಕರ ಪರವಾಗಿ ಅತ್ಯುತ್ತಮ ಕೆಲಸ ಮಾಡಿದ್ದಾರೆ

ಮಧುಗಿರಿ ತಾಲೂಕಿನ ಹಿಂದೆ ಶಾಸಕರಿದ್ದ ಅವಧಿಯಲ್ಲಿ ಮಧುಗಿರಿ ತಾಲೂಕು ಸ್ವಾತಂತ್ರ್ಯ ಬಂದಾಗಿನಿಂದಲೂ ಅಭಿವೃದ್ಧಿಯಲ್ಲಿ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಕಂಡಿರಲಿಲ್ಲ ರಾಜಣ್ಣ ಕಾಲದಲ್ಲಿ ಮಧುಗಿರಿ ತಾಲೂಕಿನ ಇತಿಹಾಸದಲ್ಲೇ ಎಂದು ಕಂಡುಹರಿಯದ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಆದ್ದರಿಂದ ರಾಜ್ಯ ಕಂಡ ಅಹಿಂದ ನಾಯಕ ಕೆ .ಎನ್ ರಾಜಣ್ಣ ಅವರಿಗೆ ಸಚಿವ ಸಂಪುಟದಲ್ಲಿ ಮಾನ್ಯ ಎಐಸಿಸಿ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ರಾಜ್ಯದ ಉಪಮುಖ್ಯಮಂತ್ರಿಗಳು ಮತ್ತು ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ರಾಜಣ್ಣ ಅವರಿಗೆ ಸಚಿವ ಸ್ಥಾನ ಕೊಡಬೇಕೆಂದು ಈ ಮೂಲಕ ಒತ್ತಾಯಿಸುತ್ತಿದ್ದೇವೆ. ಒಂದು ವೇಳೆ ಸಚಿವ ಸ್ಥಾನ ನೀಡದಿದ್ದರೆ ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯ ವಾಲ್ಮೀಕಿ ಸಮುದಾಯ ಹಾಗೂ ಎಲ್ಲಾ ಶೋಷಿತ ಸಮುದಾಯಗಳು ಜಿಲ್ಲೆಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದೆಂದು ಈ ಮೂಲಕ ಎಚ್ಚರಿಕೆಯನ್ನು ನೀಡುತ್ತೇವೆ

ಟಿ ಎಸ್ ಕೃಷ್ಣಮೂರ್ತಿ

ಸಂಪಾದಕ ತುಮಕೂರು 9743340694

You May Also Like

error: Content is protected !!