ರಾಜ್ಯದಲ್ಲಿ ಜುಲೈ23ರ ವರೆಗೂ ಬಾರಿ ಮಳೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್

ಬೆಂಗಳೂರು : ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆರಾಯನ ಅಬ್ಬರ ಮುಂದುವರೆದಿದೆ. ಹೀಗಾಗಿ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಕಾವೇರಿ ನದಿಯ ಹರಿವು ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೀಗಾಗಿ ಕಾವೇರಿ ನದಿ ತೀರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಭಾರೀ ಮಳೆಯ ಪರಿಣಾಮ ಹಾರಂಗಿ ಜಲಾಶಯಕ್ಕೆ ಒಳಹರಿವು ಕೂಡಾ ಹೆಚ್ಚಾಗಿದೆ. ಕೆಆರ್ ಎಸ್ ಕಳೆದೊಂದು ವಾರದಲ್ಲಿ 8 ಅಡಿ ನೀರು ತುಂಬಿಕೊಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಅತಿ ದೊಡ್ಡ ಜಲಾಶಯವಾದ ಲಿಂಗನಮಕ್ಕಿ ಸೇರಿದಂತೆ ಇತರೆ ಪ್ರಮುಖ ಜಲಾಶಯಗಳಾದ ಕಾವೇರಿ ಕಣಿವೆ ಭಾಗದ ಕೆಆರ್ ಎಸ್ , ಕಬಿನಿ, ಹೇಮಾವತಿ, ಹಾರಂಗಿ ಮತ್ತು ಜಲ ವಿದ್ಯುತ್ ಅಣೆಕಟ್ಟೆಗಳು,ಲಿಂಗನಮಕ್ಕಿ, ಸೂಪಾ ಮತ್ತು ಕೃಷ್ಣಾ ನದಿ ಭಾಗದ ಜಲಾಶಯಗಳಾದ ತುಂಗಭದ್ರಾ, ಭದ್ರಾ, ಘಟಪ್ರಭಾ, ಮಲಪ್ರಭಾ, ನಾರಾಯಣಪುರ, ಆಲಮಟ್ಟಿ ಜಲಾಶಯಗಳು ಭರ್ತಿಯಾಗುತ್ತಿವೆ

You May Also Like

error: Content is protected !!