BIG NEWS : ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾಗಿ ನಟಿ ಶೃತಿ ನೇಮಕ

ಬೆಂಗಳೂರು: ಚಲನಚಿತ್ರನಟಿ ಶೃತಿ ಅವರನ್ನು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರನ್ನಾಗಿ ರಾಜ್ಯ ಸರ್ಕಾರ ಹೊಸದಾಗಿ ನೇಮಿಸಿದೆ. ಈವರೆಗೂ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಅವರನ್ನು ನಿನ್ನೆಯಷ್ಟೇ ಬದಲಾವಣೆ ಮಾಡಲಾಗಿತ್ತು. ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಆಪ್ತ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ಈ ಹುದ್ದೆಗೆ ನೇಮಿಸಲಾಗಿತ್ತು.
ಇಂದು ಬೆಳಗ್ಗೆ ಕಾವೇರಿ ನಿವಾಸದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಶೃತಿ ತಮ್ಮನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದವರ ಬಗ್ಗೆ ಕಾರಣ ಕೇಳಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.

You May Also Like

error: Content is protected !!