ನಾಳೆ ಸಂಜೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ತಿಳಿಸಿದರು. ನಗರದ ವಿವಿಧ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸಂಜೆ 4.30 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸುವುದಾಗಿ ಹೇಳಿದರು. ರಾಜ್ಯದಲ್ಲಿ 34 ಮಕ್ಕಳು ಕೋವಿಡ್ ಪಾಸಿಟಿವ್ ಹೊಂದಿದ್ದರು. ಪರೀಕ್ಷೆ ಬರೆಯಲು ಅವರಿಗೆ ಅವಕಾಶ ಮಾಡಿಕೊಡಲಾಗಿದೆ. ಮಳೆಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಬೆಳಗಾವಿ, ಚಿಕ್ಕೋಡಿ ಸೇರಿದಂತೆ ಎಲ್ಲೂ ಕೂಡ ತೊಂದರೆಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಪ್ರವೇಶ ಪತ್ರ ಮತ್ತಿತರ ತೊಂದರೆಯಿಂದ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಆಗಸ್ಟ್‍ನಲ್ಲಿ ನಡೆಯುವ ಪೂರಕ ಪರೀಕ್ಷೆಯಲ್ಲಿ ಅವಕಾಶ ಮಾಡಿಕೊಡಲಾಗುವುದು. ಇನ್ನು ಮೂರೇ ವಾರದಲ್ಲಿ ಆ ಪರೀಕ್ಷೆಯು ನಡೆಯಲಿದೆ. ಸಾಧ್ಯವಾದಷ್ಟು ಮಟ್ಟಿಗೆ ಪ್ರವೇಶ ಪತ್ರ ಬಗೆಹರಿಸುವ ಪ್ರಯತ್ನ ಮಾಡಲಾಗಿದೆ ಎಂದರು.

You May Also Like

error: Content is protected !!