ಅಶ್ಲೀಲ ಸಿನಿಮಾ ನಿರ್ಮಾಣದ ಆರೋಪ; ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

ಬಾಲಿವುಡ್‌ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಅವರ ಪತಿ, ಉದ್ಯಮಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಸಿನಿಮಾಗಳನ್ನು ಚಿತ್ರೀಕರಿಸಿ, ಅದನ್ನು ವಿವಿಧ ಆ್ಯಪ್ಗಳ ಮೂಲಕ ವಿತರಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ರಾಜ್‌ ಕುಂದ್ರಾರನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ದಿನಗಳಿಂದಲೂ ಮುಂಬೈ ಪೊಲೀಸರಿಗೆ ಈ ಬಗ್ಗೆ ಅನುಮಾನವಿತ್ತು. ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ ನಂತರ ಅವರನ್ನು ಸೋಮವಾರ (ಜು.19) ಬಂಧಿಸಲಾಗಿದೆ.

ಮುಂಬೈನಲ್ಲಿ ಅಶ್ಲೀಲ ಸಿನಿಮಾಗಳನ್ನು ತಯಾರಿಸಿ, ಅವುಗಳನ್ನು ವಿವಿಧ ಆ್ಯಪ್ಗಳ ಮೂಲಕ ಹಂಚಿಕೆ ಮಾಡುತ್ತಿದ್ದಾರೆ ಎಂಬ ಅನುಮಾನ ಹಲವು ತಿಂಗಳಿನಿಂದ ಪೊಲೀಸರನ್ನು ಕಾಡುತ್ತಿತ್ತು. ಈ ಸಂಬಂಧ ಕಳೆದ ಫೆಬ್ರವರಿಯಲ್ಲಿ ದೂರು ದಾಖಲಾಗಿತ್ತು ಕೂಡ. ಇದೀಗ ಸರಿಯಾದ ಸಾಕ್ಷಿಗಳನ್ನು ಸಂಗ್ರಹಿಸಿರುವ ಮುಂಬೈ ಪೊಲೀಸರು ರಾಜ್ ಕುಂದ್ರಾರನ್ನು ಬಂಧಿಸಿದ್ದಾರೆ. ಇಡೀ ಪ್ರಕರಣದ ಪ್ರಮುಖ ಆರೋಪಿ ರಾಜ್ ಕುಂದ್ರಾ ಅವರೇ ಅನ್ನೋದು ಅಚ್ಚರಿಯ ವಿಷಯವಾಗಿದೆ!

‘ಅಶ್ಲೀಲ ಚಿತ್ರಗಳನ್ನು ತಯಾರಿಸಿ, ಅವುಗಳನ್ನು ವಿವಿಧ ಆ್ಯಪ್ಗಳ ಮೂಲಕ ರಿಲೀಸ್ ಮಾಡುತ್ತಿದ್ದಾರೆ ಎಂದು ಫೆಬ್ರವರಿಯಲ್ಲೇ ಕ್ರೈಮ್ ಬ್ರ್ಯಾಂಚ್ನಲ್ಲಿ ಪ್ರಕರಣ ದಾಖಲಾಗಿತ್ತು. ನೀಲಿ ಸಿನಿಮಾಗಳ ನಿರ್ಮಾಣದ ಪ್ರಮುಖ ಆರೋಪಿ ರಾಜ್ ಕುಂದ್ರಾ ಅವರೇ ಆಗಿದ್ದಾರೆ. ಸದ್ಯ ಅವರನ್ನು ಬಂಧಿಸಿದ್ದೇವೆ’ ಎಂದು ಮುಂಬೈ ಪೊಲೀಸ್ ಕಮಿಷನರ್ ಹೇಮಂತ್ ನಗ್ರಾಳೆ ಹೇಳಿದ್ದಾರೆ

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!