ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಈ ಬಾರಿ ಬಾಲಕರದ್ದೇ ಮೈಲುಗೈ!

!

ಬೆಂಗಳೂರು: 2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.

ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಎಸ್ಎಸ್ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ ಕೃಪಾಂಕ ಅನುಸರಿಸಿ ಫಲಿತಾಂಶವನ್ನು ನೀಡಲಾಗಿದೆ

ರಾಜ್ಯದಲ್ಲಿ ಒಟ್ಟಾರೆ 6,66,497 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 3,35,138 ವಿದ್ಯಾರ್ಥಿಗಳು ಹಾಗೂ 3,31,359 ವಿದ್ಯಾರ್ಥಿನಿಯರಿದ್ದಾರೆ.

You May Also Like

error: Content is protected !!