ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಗುಡ್ ನ್ಯೂಸ್: 2 ವರ್ಷದಲ್ಲಿ 5 ಲಕ್ಷ ಮನೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ನಿರ್ಧಾರ

ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ,ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಸುಮಾರು 8 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲಿದ್ದು, ಪ್ರತಿಯೊಂದು ಗ್ರಾಮ ಪಂಚಾಯಿತಿಗಳ ಮೂಲಕ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ನಗರದಲ್ಲಿ ಆಸರೆ ಸಮಿತಿಯ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು. ಎರಡು ವರ್ಷದಲ್ಲಿ ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಹಣಕಾಸು ಇಲಾಖೆಯೊಂದಿಗೆ ಚರ್ಚೆ ನಡೆಸಿಯೇ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!