ಸಿಎಂ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ: ಸಿ.ಪಿ. ಯೋಗೇಶ್ವರ್

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಬದಲಾವಣೆ ಕುರಿತು ಸಚಿವ ಸಿ.ಪಿ. ಯೋಗೇಶ್ವರ್ ಅವರು ಮೊದಲ ಸಲ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಬಗ್ಗೆ ನಂದಿ ಬೆಟ್ಟದಲ್ಲಿ ಮಾತನಾಡಿರುವ ಅವರು, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಗೆ ಕುರಿತು ಸ್ವತಃ ಬಿ.ಎಸ್. ಯಡಿಯೂರಪ್ಪ ಅವರೇ ಹೇಳಿಕೆ ನೀಡುತ್ತಿದ್ದಾರೆ. ನಿನ್ನೆ ಹಾಗೂ ಮೊನ್ನೆ ಬಹಿರಂಗವಾಗಿ ಮಾಧ್ಯಮಗಳ ಮುಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾತನಾಡಿದ್ದಾರೆ. ಯಡಿಯೂರಪ್ಪ ಅವರು ಹಿರಿಯರಿದ್ದಾರೆ. ಜೊತೆಗೆ ಅವರ ಬದಲಾವಣೆ ಕುರಿತು ನನಗೆ ಹೆಚ್ಚಿನ ಮಾಹಿತಿಯಿಲ್ಲ. ಆದರೆ ಸ್ವತಃ ಮುಖ್ಯಮಂತ್ರಿಗಳೇ ನಾಯಕತ್ವ ಬದಲಾವಣೆ ಬಗ್ಗೆ ಸ್ಪಷ್ಟಪಡಿಸುತ್ತಿದ್ದಾರೆ. ನಾನೂ ಎಲ್ಲವನ್ನೂ ಗಮನಿಸುತ್ತೇದ್ದೇನೆ” ಎಂಬ ಕುತೂಹಲದ ಹೇಳಿಕೆ ಕೊಟ್ಟಿದ್ದಾರೆ.

ಇದೇ ಸಂದರ್ಭದಲ್ಲಿ ಮತ್ತೊಂದು ಮಹತ್ವದ ಮಾತನ್ನು ಸಚಿವ ಸಿಪಿ ಯೋಗೇಶ್ವರ್ ಹೇಳಿದ್ದಾರೆ. “ನನ್ನ ಹಾಗೂ ಜಿಲ್ಲೆಯ ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಾನು ಮಾತನಾಡಿದ್ದೇನೆ. ಜೊತೆಗೆ ನನಗೆ ಇತರ ಪಕ್ಷಗಳು ಕೊಟ್ಟಿರುವ ತೊಂದರೆಗಳ ಬಗ್ಗೆಯೂ ಮಾತನಾಡಿದ್ದೇನೆ. ಹೀಗಾಗಿ ನಮ್ಮ ವರಿಷ್ಠರು ಹಾಗೂ ಹಿರಿಯರು ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ” ಎಂದಿದ್ದಾರೆ.

ಇನ್ನು ಬೇರೆ ಪಕ್ಷಗಳಿಂದ ಬಂದು ಸಚಿವರಾದವರ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಅವರು, “ಬೇರೆ ಪಕ್ಷಗಳಿಂದ ಬಂದವರಿಗೆ ನಾಯಕತ್ವ ಬದಲಾವಣೆ ಆದ ಮೇಲೆ ಸಚಿವ ಸ್ಥಾನದ ಬಗ್ಗೆ ನನಗೆ ಗೊತ್ತಿಲ್ಲ. ಊಹಾಪೋಹಗಳಿಗೆ ಉತ್ತರ ನೀಡುವ ಹಕ್ಕು ನನಗಿಲ್ಲ. ಆದರೆ ಯಾರಿಗೂ ಕೂಡ ಮಂತ್ರಿಸ್ಥಾನ ಶಾಶ್ವತವಲ್ಲ” ಎನ್ನುವ ಮೂಲಕ ಯೋಗೇಶ್ವರ್ ಕುತೂಹಲ ಮೂಡಿಸಿದ್ದಾರೆ.

You May Also Like

error: Content is protected !!