BREAKING: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ‘ಸವಾಲುಗಳ ಮೀರಿದ ಸಾಧನಾ ಪರ್ವ; ಸರ್ಕಾರದ ಸಾರ್ಥಕ ಸೇವೆಯ ಎರಡು ವರ್ಷಗಳು’ ಪುಸ್ತಕವನ್ನು ಸಿಎಂ ಯಡಿಯೂರಪ್ಪ ಹಾಗೂ ಮೂವರು ಉಪ ಮುಖ್ಯಮಂತ್ರಿಗಳು ಬಿಡುಗಡೆ ಮಾಡಿದ್ದಾರೆ. ಇದೀಗ ಕಾರ್ಯಕ್ರಮ ಮುಂದುವರೆದಿದ್ದು, ಕಾರ್ಯಕ್ರಮದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜಭವನಕ್ಕೆ ತೆರಳಿ ರಾಜೀನಾಮೆ ಕೊಡುತ್ತಾರಾ? ಅಥವಾ “ನೀವೆ ಮುಂದುವರೆಯಿರಿ” ಎಂದು ಹೈಕಮಾಂಡ್‌ನಿಂದ ಸಂದೇಶ ಬರುತ್ತದೆಯಾ? ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!