ಗುರುವಾರ ಹೊಸ ಸಿಎಂ ಪದಗ್ರಹಣ ಸಾಧ್ಯತೆ

ಬೆಂಗಳೂರು: ನಿರೀಕ್ಷೆಯಂತೆಯೇ ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜಿನಾಮೆ ನೀಡಿದ್ದು, ರಾಜ್ಯಪಾಲರು ಹಾಲಿ ಸಚಿವ ಸಂಪುಟವನ್ನು ವಿಸರ್ಜನೆ ಮಾಡಿದ್ದಾರೆ
ಇನ್ನು ಇದೇ ಗುರುವಾರ ಮುಂದಿನ ಸಿಎಂ ಪದಗ್ರಹಣ ಮಾಡುವ ಸಾಧ್ಯತೆ ಇದ್ದು, ಈಗಾಗಲೇ ಈ ಸಂಬಂಧ ಸಿದ್ಧತೆಗಳು ಆರಂಭಗೊಂಡಿವೆ. ಹೊಸಮುಖ, ಶುದ್ಧಹಸ್ತ ರಾಜಕಾರಣಿಗೆ ಸಿಎಂ ಸ್ಥಾನ ನೀಡಲು ಬಿಜೆಪಿ ಹೈಕಮಾಂಡ್ ಒಲವು ತೋರಿದೆ ಎಂದು ಹೇಳಲಾಗುತ್ತಿದೆ. ಮಹಾರಾಷ್ಟ್ರ, ಗೋವಾ ಮಾದರಿಯಲ್ಲಿ ಹೊಸಬರ ಆಯ್ಕೆ ಆಗುವ ಸಾಧ್ಯತೆ ಇದೆ.

ಇನ್ನು ಈ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಅವರು, ‘ಮುಂದಿನ ಮುಖ್ಯಮಂತ್ರಿ ಯಾರು ಅಂತ ಬಿ.ಎಸ್.ಯಡಿಯೂರಪ್ಪ ಅವರೇ ಹೇಳುತ್ತಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ಸಂಸದೀಯ ಮಂಡಳಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು

ಒಟ್ಟಾರೆ ಮುಖ್ಯಮಂತ್ರಿ ಹುದ್ದೆಯಿಂದ ಬಿ.ಎಸ್. ಯಡಿಯೂರಪ್ಪ ಅವರ ನಿರ್ಗಮನದೊಂದಿಗೆ ದಕ್ಷಿಣ ಭಾರತದಲ್ಲಿ ಬಿಜೆಪಿ ಹೈಕಮಾಂಡ್ ಹೊಸ ರಾಜಕೀಯ ನಿರ್ಧಾರಕ್ಕೆ ಮುಂದಾಗಿದೆ. ತನ್ನ ಪ್ರಯೋಗದಲ್ಲಿ ಬಿಜೆಪಿ ಎಷ್ಟರ ಮಟ್ಟಿಗೆ ಗುರಿ ಮುಟ್ಟಲಿದೆ ಎಂಬುದು ಕುತೂಹಲ ಮೂಡಿಸಿದೆ. ಬಿಜೆಪಿ ಹೈಕಮಾಂಡ್ ಮಾಡಲಿರುವ ಹೊಸ ಪ್ರಯೋಗದ ಫಲಿತಾಂಶ 2023 ರಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆ ಹಾಗೂ 2024ರಲ್ಲಿನ ಲೋಕಸಭಾ ಚುನಾವಣೆಯಲ್ಲಿ ಬರಲಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!