ವಸತಿ ಶಾಲೆ: 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ

ತುಮಕೂರು: ಜಿಲ್ಲೆಯಲ್ಲಿ ಸಮಾಜ ಕಲ್ಯಾಣ/ ಪರಿಶಿಷ್ಠ ವರ್ಗಗಳ ಕಲ್ಯಾಣ/ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ/ ಡಾ.ಬಿ.ಆರ್.ಅಂಬೇಡ್ಕರ್/ಶ್ರೀಮತಿ ಇಂದಿರಾಗಾಂಧಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ 2021-22 ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಸತಿ ಶಾಲೆಗಳ 6ನೇ ತರಗತಿ ಪ್ರವೇಶ ಪಡೆಯುವವರಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು(KEA) ಸೆಪ್ಟಂಬರ್ 16ರಂದು ಪ್ರವೇಶ ಪರೀಕ್ಷೆ ನಡೆಸಲಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 10ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳು ತಮ್ಮ ಅರ್ಜಿಯೊಂದಿಗೆ ಎಸ್‌ಎಟಿಎಸ್ ಸಂಖ್ಯೆ (ವಿದ್ಯಾರ್ಥಿಯ ಬಹುತೇಕ ಪ್ರಮುಖ ಮಾಹಿತಿಗಳು SATS ನಿಂದ fetch ಆಗುವುದರಿಂದ SATS ನಲ್ಲಿ ವಿದ್ಯಾರ್ಥಿಯ ಸಂಪೂರ್ಣ ಮಾಹಿತಿ ಅಪ್ ಡೇಟ್ ಇರಬೇಕು. ಉದಾ: ಹೆಸರು, ಜಾತಿ/ಪ್ರವರ್ಗ, ಜನ್ಮ ದಿನಾಂಕ, ವಿಳಾಸ, ಇತ್ಯಾದಿ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ (ಅರ್ಜಿ ಸಲ್ಲಿಸುವ ದಿನಾಂಕದವರೆಗೂ ಚಾಲ್ತಿಯಲ್ಲಿರಬೇಕು. ಎಸ್‌ಸಿ/ಎಸ್‌ಟಿ/ಪ್ರವರ್ಗ-1ಕ್ಕೆ ಸೇರಿದವರಿಗೆ 2,5೦,೦೦೦ ರೂ., ಹಾಗೂ 2ಎ, 2ಬಿ, 3ಎ, 3ಬಿ ವರ್ಗದವರಿಗೆ 1,೦೦,೦೦೦ ರೂ. ಗರಿಷ್ಠ ಆದಾಯ ಮಿತಿ ಇರಬೇಕು) ಸೇರಿದಂತೆ ಇತ್ತೀಚಿನ ಎರಡು ಭಾವಚಿತ್ರ ಲಗತ್ತಿಸಿ ಸಲ್ಲಿಸಬೇಕು.

ಇತರೆ ಮೀಸಲಾತಿ ಪ್ರಮಾಣ ಪತ್ರಗಳಾದ ವಿಶೇಷ ಚೇತನ ಮಗು((PH), ಅಲೆಮಾರಿ/ ಅರೆ ಅಲೆಮಾರಿ/ ಸೂಕ್ಷ್ಮ/ ಅತಿ ಸೂಕ್ಷ್ಮ ಮಗು, ಮಾಜಿ ಸೈನಿಕರ ಮಗು, ಆಶ್ರಮ/ ವಸತಿ ಶಾಲೆ ಮಗು, ಪೌರ ಕಾರ್ಮಿಕರ/ಸಫಾಯಿ ಕರ್ಮಚಾರಿ ಮಗು, ವಿಶೇಷ ವರ್ಗ( ಬಾಲ ಕಾರ್ಮಿಕ, ವಿಧವೆ ಮಗು, ದೇವದಾಸಿ

ಮಗು, ವಿಧುರನ ಮಗು, ಯೋಜನಾ ನಿರಾಶ್ರಿತರ ಮಗು, ಅನಾಥ ಮಗು, ಹೆಚ್.ಐ.ವಿ ಪೀಡಿತರ ಮಗು, ಆತ್ಮಹತ್ಯೆ ರೈತರ ಮಗು) ಹಾಗೂ ಸ್ಥಳೀಯ ಅಭ್ಯರ್ಥಿ( ಸ್ಥಳೀಯ ಅಭ್ಯರ್ಥಿ ಎಂದರೆ ಸ್ವಂತ ತಾಲ್ಲೂಕಿನ ಅಭ್ಯರ್ಥಿ) ಆಗಿದ್ದಲ್ಲಿ ಸಂಬಂಧಿತ ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿ ಸಲ್ಲಿಸುವ ಸಮಯದಲ್ಲಿ ಸಲ್ಲಿಸಬೇಕು.

ಅರ್ಜಿಯನ್ನು ಸಮೀಪದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಮೊರಾರ್ಜಿ ದೇಸಾಯಿ ಹಾಗೂ ಇತರೆ ವಸತಿ ಶಾಲೆಯಲ್ಲಿಯೇ ಆನ್ ಲೈನ್ ಮೂಲಕವೇ ಸಲ್ಲಿಸಬೇಕು. ಅಭ್ಯರ್ಥಿಯು ತನ್ನ ಸ್ವಂತ ಜಿಲ್ಲೆ(ಸ್ವಂತ ಜಿಲ್ಲೆ ಎಂದರೆ ಜಾತಿ, ಆದಾಯ ಪ್ರಮಾಣ ಪತ್ರ ಅಥವಾ ಆಧಾರ್ ಕಾರ್ಡ್, SATS ನಲ್ಲಿ ನಮೂದಿಸಿರುವ ಜಿಲ್ಲೆ)ಯ ವಸತಿ ಶಾಲೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಅರ್ಜಿಯಲ್ಲಿ ನಮೂದಿಸಬೇಕು.

SATS ವಿವರದಲ್ಲಿ ಯಾವುದೇ ನ್ಯೂನ್ಯತೆಯನ್ನು ನೇರವಾಗಿ ಮಾರ್ಪಾಡು ಮಾಡಲು ಅರ್ಜಿ ಹಾಕುವ ಸ್ಥಳದಲ್ಲಿ ಅವಕಾಶವಿರುವುದಿಲ್ಲ. ಪ್ರಸ್ತುತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಾಲೆಯಲ್ಲಿ ಸರಿಪಡಿಸಿಕೊಂಡು ಬಂದ ನಂತರ ಅದನ್ನು ಪರಿಗಣಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ತಿಳಿಸಿದ್ದಾರೆ.

You May Also Like

error: Content is protected !!