ರಾಜ್ಯದಲ್ಲಿ ಕೊರೋನಾಗೆ 32 ಬಲಿ: ಇಂದು 1,501 ಪ್ರಕರಣ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,501 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,97,664ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 32 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,437ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಬೆಂಗಳೂರಿನಲ್ಲಿ ಇಂದು 354 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,25,581ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 2,039 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,38,717ಕ್ಕೆ ಏರಿಕೆಯಾಗಿದೆ. ಇನ್ನು 22,487 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,02,494 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,501 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.46ಕ್ಕೆ ಇಳಿದಿದೆ.

You May Also Like

error: Content is protected !!