Breaking News: ರಾಜ್ಯದ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿರನ್ನು ಆಯ್ಕೆ ಮಾಡಲಾಗಿದೆ. ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ಇಂದು ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ವೀಕ್ಷಕರು ಘೋಷಿಸಿದ್ದಾರೆ. ಜುಲೈ 26ರಂದು ತಮ್ಮ ಸರ್ಕಾರ 2ನೇ ವರ್ಷದ ಸಂಭ್ರಮಾಚರಣೆ ನಂತರ ಬಿ.ಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಹೊಸ ಸಿಎಂ ಆಯ್ಕೆ ಭಾರಿ ಕುತೂಹಲ ಕೆರಳಿಸಿತ್ತು.

ಶಾಸಕಾಂಗ ಪಕ್ಷದ ನೂತನ ನಾಯಕ ನಾಳೆ(ಜುಲೈ 27) ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಆ ಬಳಿಕ ಮುಂದಿನ ಎರಡು ದಿನಗಳಲ್ಲಿ ಪೂರ್ಣ ಪ್ರಮಾಣದ ಸಂಪುಟ ರಚನೆಯನ್ನು ಮಾಡಲಾಗುತ್ತದೆ ಎಂಬ ಮಾಹಿತಿಯೂ ಇದೆ. ಉಪ ಮುಖ್ಯಮಂತ್ರಿಗಳ ಆಯ್ಕೆ ಬಗ್ಗೆ ಯಾವುದೇ ಮಾಹಿತಿ ಪ್ರಕಟವಾಗಿಲ್ಲ. 2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಜಾತಿ, ಮತ, ಪಂಥ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಅಚ್ಚರಿಯ ಹೆಸರೊಂದನ್ನು ಹೈಕಮಾಂಡ್ ಘೋಷಿಸಿದೆ. ಸಿಎಂ ಸ್ಥಾನದ ರೇಸಿನಲ್ಲಿ ಲಿಂಗಾಯತ ನಾಯಕರ ಕೋಟಾದಡಿಯಲ್ಲಿ ಅರವಿಂದ್ ಬೆಲ್ಲದ್ ಹಾಗೂ ಮುರುಗೇಶ್ ನಿರಾಣಿ ಮುಂಚೂಣಿಯಲ್ಲಿದ್ದರು. ಆದರೆ, ಅಂತಿಮ ಕ್ಷಣದಲ್ಲಿ ಆರೆಸ್ಸೆಸ್ ಹಾಗೂ ಬಿಜೆಪಿ ವರಿಷ್ಠರ ಒಲವು ಗಳಿಸಿದ ಬೊಮ್ಮಾಯಿಗೆ ಹಂಗಾಮಿ ಸಿಎಂ ಯಡಿಯೂರಪ್ಪ ಅವರ ಶ್ರೀರಕ್ಷೆಯೂ ದೊರೆತ್ತಿದ್ದು, ಸಿಎಂ ಆಗಿ ಶಾಸಕರ ಬೆಂಬಲವನ್ನು ಗಳಿಸಿದ್ದಾರೆ.

You May Also Like

error: Content is protected !!