ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ 3 ಡಿಸಿಎಂ! ಬಿ. ಶ್ರೀರಾಮುಲು, ಆರ್. ಅಶೋಕ, ಗೋವಿಂದ ಕಾರಜೋಳ

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪ್ರಯೋಗಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ. ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಆದರೆ, ಉಪ ಮುಖ್ಯಮಂತ್ರಿ ಆಯ್ಕೆ ಕೂಡಾ ಕುತೂಹಲಕಾರಿಯಾಗಿದೆ.

2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭವಾಗಿದ್ದು, ಜಾತಿ, ಮತ, ಪಂಥ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.

ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ. ಒಕ್ಕಲಿಗ ಸಮುದಾಯದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.

You May Also Like

error: Content is protected !!