ಅಂತರರಾಷ್ಟ್ರೀಯ ಹುಲಿ ದಿನ

ಇಂದು ವಿಶ್ವ ಹುಲಿ ದಿನಾಚರಣೆಯಾಗಿದ್ದು, ನಮ್ಮ ರಾಷ್ಟ್ರೀಯ ಪ್ರಾಣಿಯಾದ ಹುಲಿಗಳ ಸಂಖ್ಯೆ ಕರ್ನಾಟಕದಲ್ಲಿಯೇ ಅತಿಹೆಚ್ಚು ಇರುವುದು ನಮ್ಮ ಹೆಮ್ಮೆಯ ಸಂಗತಿಯಾಗಿದೆ.

ಹೌದು, 2014ರ ಹುಲಿಗಣತಿಯ ಪ್ರಕಾರ ಭಾರತದಲ್ಲಿ ಒಟ್ಟು 2,264 ಹುಲಿಗಳಿದ್ದು, ಕರ್ನಾಟಕದಲ್ಲಿಯೇ ಸುಮಾರು 229 ಹುಲಿಗಳು ಕಂಡುಬರುತ್ತವೆ. ಈ ಮೂಲಕ ರಾಷ್ಟ್ರದಲ್ಲಿಯೇ ಅತಿಹೆಚ್ಚು ಹುಲಿಗಳಿರುವ ರಾಜ್ಯ ಎಂಬ ಹೆಗ್ಗಳಿಕೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ರಾಜ್ಯದ ಬಂಡೀಪುರ ಮತ್ತು ನಾಗರಹೊಳೆ ಅಭಯಾರಣ್ಯಗಳು ಹುಲಿ ಸಂರಕ್ಷಿತ ಅಭಯಾರಣ್ಯಗಳಾಗಿವೆ.

ಏನಿದು ಹುಲಿ ದಿನ?

ಹುಲಿ ಸಂರಕ್ಷಣೆ ಮತ್ತು ಸಾರ್ವಜನಿಕರಲ್ಲಿ ಹುಲಿಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ 2010 ರ ಜುಲೈ 29ರಂದು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಹುಲಿ ದಿನವನ್ನು ರಷ್ಯಾದ ಸೆಂಟ್ ಪೀಟರ್ ಬರ್ಗ್‍ನಲ್ಲಿ ಆಚರಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಜುಲೈ 29 ರಂದು ಅಂತರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತಿದೆ. ಈ ದಿನದಂದು ಹುಲಿ ಸಂರಕ್ಷಣೆ ಕುರಿತು ಚರ್ಚೆ, ಉಪನ್ಯಾಸ, ಜಾಥಾ, ವಿಚಾರ ಸಂಕಿರಣ ಹಾಗೂ ಛಾಯಾಚಿತ್ರ ಪ್ರದರ್ಶನ ದೇಶಾದ್ಯಂತ ನಡೆಯುತ್ತದೆ. ಇಂದಿನ ದಿನಗಳಲ್ಲಿ ಹುಲಿಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಮತ್ತು ಹುಲಿ ಸಂರಕ್ಷಣೆಯನ್ನು ಉತ್ತೇಜಿಸುವುದು ಈ ಆಚರಣೆಯ ಪ್ರಮುಖ ಉದ್ದೇಶವಾಗಿದೆ.

ಜಗತ್ತಿನ 13 ದೇಶಗಳಲ್ಲಿ ಮಾತ್ರ ಹುಲಿ ಸಂತತಿ ಬರುತ್ತದೆ. ವಿಶ್ವದಲ್ಲಿ ಒಟ್ಟು 6 ಜಾತಿಯ ಹುಲಿಗಳಿದ್ದು, ಅತಿಹೆಚ್ಚು ಹುಲಿಗಳು ಏಷ್ಯಾಖಂಡದಲ್ಲಿಯೇ ಕಾಣಸಿಗುತ್ತವೆ. ಭಾರತದಲ್ಲಿಯೇ ಸುಮಾರು 2,264 ಕ್ಕೂ ಹೆಚ್ಚು ಹುಲಿಗಳಿದ್ದು, 6000 ಹುಲಿಗಳು ವಾಸ ಮಾಡುವಷ್ಟು ಅರಣ್ಯ ಪ್ರದೇಶವನ್ನು ನಾವು ಹೊಂದಿದ್ದೇವೆ. ಅಲ್ಲದೇ 50 ಹುಲಿ ಸಂರಕ್ಷಿತ ಅಭಯಾರಣ್ಯಗಳನ್ನು ಭಾರತ ಹೊಂದಿದೆ.

You May Also Like

error: Content is protected !!