ರಾಜ್ಯದಲ್ಲಿ ಜೆಡಿಎಸ್ ಬಲಿಷ್ಠ: ದಿ.ಅನಂತಕುಮಾರ್ ಪುತ್ರಿ ವಿಜೇತಾ ಟ್ವೀಟ್..!

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಪ್ರಬಲ ರಾಜಕೀಯ ಶಕ್ತಿಯಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಮಗಳು ವಿಜೇತಾ ಟ್ವೀಟ್ ಮಾಡಿದ್ದಾರೆ.

ರಾಜ್ಯ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕವಾಗಿದೆ? ಎಂದು ಸಹ ಪ್ರಶ್ನಿಸಿರುವ ಅವರು, ಜಾತ್ಯತೀತ ಜನತಾದಳ ಪಕ್ಷ ರಾಜ್ಯದಲ್ಲಿ ಇನ್ನೂ ಬಲಿಷ್ಠವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಹಿರಿಯ ಮತ್ತು ಪ್ರಭಾವಿ ಬಿಜೆಪಿ ನಾಯಕರಾಗಿದ್ದ ಅನಂತಕುಮಾರ್ ಅವರ ಪುತ್ರಿಯಾಗಿರುವ ಕಾರಣ ಅವರ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗುತ್ತಿದೆ.


ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಈ ಟ್ವೀಟ್ ತುಂಬಾ ಮಹತ್ವ ಪಡೆದುಕೊಂಡಿದೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!