ಜೆಡಿಎಸ್ ರಣತಂತ್ರ: ಶ್ರಾವಣದಲ್ಲಿ ಮಾಸದಲ್ಲಿ ಜೆಡಿಎಸ್ ನಾಯಕರ ಜಿಲ್ಲಾವಾರು ಪ್ರವಾಸ

ಬೆಂಗಳೂರು: ಆಷಾಢ ಮಾಸ ಕಳೆಯುತ್ತಿದ್ದಂತೆ ಜೆಡಿಎಸ್ ನಾಯಕರು ವಿಭಾಗವಾರು ಹಾಗೂ ಜಿಲ್ಲಾ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಯನ್ನು ಬಲಗೊಳಿಸಲಿದ್ದಾರೆ. ಜಿಲ್ಲಾವಾರು ಸರಣಿ ಸಭೆಗಳನ್ನು ನಡೆಸುತ್ತಿರುವ ಜೆಡಿಎಸ್ ನಾಯಕರು, ಶ್ರಾವಣ ಮಾಸದಲ್ಲಿ ಜಿಲ್ಲಾವಾರು ಪ್ರವಾಸ ಕೈಗೊಳ್ಳಲಿದ್ದಾರೆ.

ಜಿಲ್ಲಾವಾರು ಸರಣಿ ಸಭೆಗಳು ಶುಕ್ರವಾರ ಮುಕ್ತಾಯವಾಗಲಿವೆ. ಆಷಾಢ ಮಾಸ ಕಳೆದ ನಂತರ ಜಿಲ್ಲಾವಾರು ಮತ್ತು ವಿಭಾಗವಾರು ಪ್ರವಾಸವನ್ನು ಎಲ್ಲ ಪ್ರಮುಖ ನಾಯಕರು ಕೈಗೊಂಡು ಸ್ಥಳೀಯವಾಗಿ ಪಕ್ಷ ಬಲವರ್ಧನೆಗೆ ಕಾರ್ಯಕರ್ತರು ಮತ್ತು ಮುಖಂಡರಿಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ಧತೆ, ಅಭ್ಯರ್ಥಿಗಳ ಗುರುತಿಸುವಿಕೆ, ಪಕ್ಷದ ಸದಸ್ಯತ್ವ ನೋಂದಣಿ ಹಾಗೂ ತಳಮಟ್ಟದಿಂದ ಪಕ್ಷ ಸಂಘಟಿಸುವ ಬಗ್ಗೆ ಪ್ರವಾಸದ ಸಂದರ್ಭದಲ್ಲಿ ಪಕ್ಷದ ನಾಯಕರು ಮಾರ್ಗದರ್ಶನ ಮಾಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಅವರನ್ನೊಳಗೊಂಡಂತೆ ಎಲ್ಲ ಪ್ರಮುಖ ನಾಯಕರು ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆಗೂ ಈಗಿನಿಂದಲೇ ಅಭ್ಯರ್ಥಿಗಳನ್ನು ಗುರುತಿಸಲಾಗುತ್ತಿದೆ. ಈಗಾಗಲೇ ಸುಮಾರು ನೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಗುರುತಿಸಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಿಕೊಳ್ಳಲು ವರಿಷ್ಠರು ಸೂಚಿಸಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!