ಶಾಲಾ-ಕಾಲೇಜು ಆರಂಭ ವಿಚಾರ : ಸಿಎಂ ಪ್ರತಿಕ್ರಿಯೆ

ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ರಿಂದ 12 ತರಗತಿವರೆಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ರಾಜ್ಯದಲ್ಲಿ ಶಾಲಾ ಕಾಲೇಜು ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಮೊದಲು ಬ್ಯಾಚ್ ವೈಸ್ ತರಗತಿ ಆರಂಭಕ್ಕೆ ನಿರ್ಧರಿಸಲಾಗಿದ್ದು, ಇದನ್ನು ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದೇ ವೇಳೆ ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, ಈ ವಿಚಾರ ಗಮನಕ್ಕೆ ಬಂದಿದ್ದು, ಉನ್ನತ ಪೋಲಿಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ.

ರಾತ್ರಿಯೇ ಹಿರಿಯ ಪೊಲೀಸ್‌ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿದ್ದಾರೆ. ಈಗಾಗಲೇ ಕೃತ್ಯ ಎಸಗಿದವರ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಶೀಘ್ರದಲ್ಲೇ ಆರೋಪಿಗಳ ಬಂಧನವಾಗುತ್ತೆ, ಕಠಿಣ ಕ್ರಮ ಕೈಗೊಳ್ತೇವೆ. ಈಗಾಗಲೇ ಶಾಸಕ ಸತೀಶ್ ರೆಡ್ಡಿ ಜೊತೆಗೂ ನಾನು ಮಾತನಾಡಿದ್ದೇನೆ ಎಂದಿದ್ದಾರೆ.

You May Also Like

error: Content is protected !!