ಕಾಂಗ್ರೆಸ್​ನ ಫ್ಯೂಸ್ ಕಿತ್ತು ಬಿಟ್ಟಿದ್ದೇವೆ; ವೈರಲ್ ಆಯ್ತು ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ

ತುಮಕೂರು: ಹಾಸನದಿಂದ ಬೆಂಗಳೂರಿಗೆ ತೆರಳುವಾಗ ಮಾರ್ಗ ಮಧ್ಯೆ ತುರುವೇಕೆರೆ ಜೆಡಿಎಸ್ (JDS) ಮುಖಂಡರ ಮನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಭೇಟಿ ನೀಡಿದ್ದರು. ಈ ವೇಳೆ ಮಾತನಾಡಿದ್ದ ಕುಮಾರಸ್ವಾಮಿ ಹೇಳಿಕೆಗಳು ಇದೀಗ ವೈರಲ್ ಆಗುತ್ತಿದೆ. ಕಾಂಗ್ರೆಸ್​ನಿಂದ ಜೆಡಿಎಸ್​ಗೆ ಯಾವುದೇ ರೀತಿಯ ಶಾಕ್ ಇಲ್ಲ. ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಸೆಳೆಯುತ್ತಿದೆ ಎಂಬ ವರದಿ ಸುಳ್ಳು. ನಾವು ಕರೆಂಟ್ ಹರಿಯಲು ಬಿಟ್ಟಿಲ್ಲ. ಕಾಂಗ್ರೆಸ್ನ ಫ್ಯೂಸ್ ಕಿತ್ತು ಬಿಟ್ಟಿದ್ದೇವೆ. ನಮಗೆ ಹೇಗೆ ಅವರು ಶಾಕ್ ಕೊಡುತ್ತಾರೆ ಅಂತ ಮಾಜಿ ಸಿಎಂ ಹೇಳಿದ್ದರು. ಈ ಹೇಳಿಕೆಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಇದೇ ವೇಳೆ ಜೆಡಿಎಸ್ ಎಂಎಲ್​ಸಿ ಬೆಮೆಲ್ ಕಾಂತರಾಜು ಅವರನ್ನು ಯಾರವನು? ಯಾವ ಪಕ್ಷದವನು ಎಂದು ಪ್ರಶ್ನಿಸಿದ್ದ ಕುಮಾರಸ್ವಾಮಿ, ಅವನು ಪಕ್ಷ ಬಿಟ್ಟು ತುಂಬಾ ದಿನ ಆಯಿತು. ಅವನ ಬಗ್ಗೆ ಮಾತನಾಡಬೇಡಿ. ಪಕ್ಷದ ಬಾಗಿಲು ತೆರೆದಿದೆ. ಬರೋರು ಬರಬಹುದು. ಹೋಗುವವರು ಹೋಗಬಹುದು ಎಂದು ಹೇಳಿದ್ದಾರೆ.

ಜೆಡಿಎಸ್ ಹೋರಾಟ ಆರಂಭ ಎಂದ ಕುಮಾರಸ್ವಾಮಿ


ನಿನ್ನೆ (ಆಗಸ್ಟ್ 23) ಹುಬ್ಬಳ್ಳಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ಜನಾಶೀರ್ವಾದ ಯಾತ್ರೆಯಲ್ಲಿ ಯಾವುದೇ ಸಂದೇಶ ಇಲ್ಲ. ಗುಂಡು ಹಾರಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಹಾರ ತುರಾಯಿ ಹಾಕಿಕೊಂಡು ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಕೊರೊನಾ ನಿಯಮ ಕೂಡಾ ವ್ಯಾಪಕವಾಗಿ ಉಲ್ಲಂಘಿಸಲಾಗುತ್ತಿದೆ. ಕಾಂಗ್ರೆಸ್ ನಾಯಕರಿಂದಲೂ ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ರಾಜಕೀಯ ನಾಯಕರಾದ ನಾವೇ ನಿಯಮ ಉಲ್ಲಂಘಿಸುತ್ತಿದ್ದೇವೆ ಎಂದು ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಗ್ರಹಿಸಿ ಆಲಮಟ್ಟಿಯಿಂದ, ಮಹದಾಯಿ ಯೋಜನೆಗಾಗಿ ಬೆಳಗಾವಿಯಿಂದ ಪಾದಯಾತ್ರೆ ಮಾಡುತ್ತೇವೆ. ಎತ್ತಿನಹೊಳೆ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತೇವೆ. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ನ್ಯಾಯ ಸಿಗುತ್ತಿಲ್ಲ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಕೇಂದ್ರದ ಕಣ್ಣು ತೆರೆಸಲು ಪಾದಯಾತ್ರೆ ಮಾಡುತ್ತೇವೆ. ಕೊರೊನಾ ಕಡಿಮೆಯಾದರೆ ಇದೇ ವಿಜಯದಶಮಿಯಿಂದ ನಮ್ಮ ಹೋರಾಟ ಆರಂಭವಾಗುತ್ತದೆ ಎಂದು ಹೇಳಿದ್ದಾರೆ.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!