ಮೈಸೂರು ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ!

ಮೈಸೂರು : ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಬಿಜೆಪಿಯ ಹಿರಿಯ ಸದಸ್ಯೆ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ಚುನಾವಣೆ ವೇಳೆ ಹೈಡ್ರಾಮ ನಡೆದಿದೆ. ಪಾಲಿಕೆಯಲ್ಲಿ ಕಾಂಗ್ರೆಸ್, ಜೆಡಿಎಸ್ ನಡುವಿನ ಮೈತ್ರಿ ಮುರಿದು ಬಿದ್ದಿದೆ. ಹೀಗಾಗಿ ಬಿಜೆಪಿ ಜಗಳದ ಲಾಭ ಪಡೆದಿದೆ.

ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿ ಮೇಯರ್ ಸ್ಥಾನ ಗಳಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಾಂಗ್ರೆಸ್, ಜೆಡಿಎಸ್ ನಾಯಕರ ನಡುವಿನ ವೈಯುಕ್ತಿಕ ಪ್ರತಿಷ್ಠೆಯಿಂದಾಗಿ ಅನಾಯಾಸವಾಗಿ ಮೇಯರ್ ಸ್ಥಾನವನ್ನು ಬಿಜೆಪಿ ಗಿಟ್ಟಿಸಿಕೊಂಡಿದೆ.
ಸೋಲು ಖಚಿತವಾಗುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ಸಭಾತ್ಯಾಗ ಮಾಡಿದ್ದಾರೆ. ಅಲ್ಲದೇ, ಜೆಡಿಎಸ್ ವಿರುದ್ಧ ತಿರುಗಿ ಬಿದ್ದಿದೆ. ಜೆಡಿಎಸ್ ವಿಶ್ವಾಸ ದ್ರೋಹಿ ಎಂದು ಘೋಷಣೆಗಳನ್ನು ಕೂಗಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

You May Also Like

error: Content is protected !!