ಭಾರತೀಯ ಜನತಾ ಪಕ್ಷ ಒಂದು ಜವಾಬ್ದಾರಿಯುತ ಪಕ್ಷ; ಚಿದಾನಂದ ಗೌಡ


ಶಿರಾ:ಭಾರತೀಯ ಜನತಾ ಪಕ್ಷ ಒಂದು ಉತ್ತಮ ಜವಾಬ್ದಾರಿಯುತವಾದ ಪಕ್ಷವಾಗಿದ್ದು ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸಿ ಪಕ್ಷ ಬಲಪಡಿಸಿ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು.
ಅವರು ತಾಲ್ಲೂಕಿನ ಬರಗೂರಿನಲ್ಲಿ ಬುಧವಾರ ಭಾರತೀಯ ಜನತಾ ಪಾರ್ಟಿ ಆಯೋಜಿಸಲಾಗಿದ್ದ ಗ್ರಾಮಾಂತರ ಮಂಡಲ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ದೇಶ ಇಂದು ಸುಭದ್ರವಾಗಿರಲು ಪ್ರಧಾನಿ ನರೇಂದ್ರ ಮೋದಿಯವರ ಸುಭದ್ರ ಆಡಳಿತವೇ ಕಾರಣ, ವಿರೋಧ ಪಕ್ಷದವರು ಸುಮ್ಮನೆ ಟೀಕಿಸುವುದನ್ನು ನಿಲ್ಲಿಸಲಿ ಎಂದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷರಾದ ಮಧು ರವರು, ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷರಾದ ನವೀನ್ ಸೀತಾರಾಮ್ ನಾಯಕ್, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ ಯವರು, ಗ್ರಾಮಾಂತರ ಅಧ್ಯಕ್ಷರಾದ ರಂಗಸ್ವಾಮಿ, ಸಿಂಡಿಕೇಟ್ ಸದಸ್ಯರಾದ ಶ್ರೀನಿವಾಸ್, ನಗರ ಅಧ್ಯಕ್ಷರಾದ ವಿಜಯರಾಜು, ಪಕ್ಷದ ಹಿರಿಯರಾದ ಬರಗೂರು ತಿಪ್ಪೇಸ್ವಾಮಿ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾದ ಬಸವರಾಜ್, ಬರಗೂರು ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಜಯರಾಮಯ್ಯ, ಸಿದ್ದಪ್ಪ ಸೇರಿದಂತೆ ಹಲವರು ಹಾಜರಿದ್ದರು.

ಪ್ರಜಾಮನ ನ್ಯೂಸ್ ಡೆಸ್ಕ್.

prajamana.com 9448797745

You May Also Like

error: Content is protected !!